ಭಾರತ- ಪಾಕಿಸ್ತಾನದ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು: ಪರೀಕ್ಷಾ ಪತ್ರಿಕೆಯಲ್ಲಿ ಹೀಗೊಂದು ಉತ್ತರ ಬರೆದ ವಿದ್ಯಾರ್ಥಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಪ್ರೇಮಿ ಸಚಿನ್‌ಗಾಗಿ ಪಾಕಿಸ್ತಾನದ ಗಡಿ ದಾಟಿಬಂದಿರುವ ಸೀಮಾ ಹೈದರ್ ಕುರಿತು ಎಲ್ಲರಿಗೂ ತಿಳಿದಿದೆ. ಆದ್ರೆ ಇತ್ತೀಚೆಗೆ ಸುದ್ದಿ ಮೂಲದಿಂದ ಹೊರವಿದ್ದ ಆಕೆ ಮತ್ತೊಮ್ಮೆ ಗಮನ ಸೆಳೆದಿದ್ದಾಳೆ.

ಯಾವ ರೀತಿ ಅಂದರೆ 12ನೇ ತರಗತಿಯ ಪರೀಕ್ಷಾ ಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬ ಸೀಮಾ ಹೈದರ್ ಉದಾಹರಣೆ ನೀಡಿದ್ದಾನೆ.

ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಶಾಲೆಯೊಂದರಲ್ಲಿ ರಾಜ್ಯಶಾಸ್ತ್ರ ಪತ್ರಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಮತ್ತು ಅದರ ಉದ್ದದ ಬಗ್ಗೆ ಪ್ರಶ್ನೆ ಇತ್ತು.

ಈ ಪ್ರಶ್ನೆಗೆ ವಿದ್ಯಾರ್ಥಿಯೊಬ್ಬ, ಭಾರತ ಮತ್ತು ಪಾಕಿಸ್ತಾನದ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು ಎಂದು ವಿದ್ಯಾರ್ಥಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದಾರೆ.

ಉತ್ತರ ಪತ್ರಿಕೆ ಬಹುತೇಕ ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟ್ರೆಂಡಿಂಗ್ ಆಗಿದೆ. ಇದು ಧೋಲ್ಪುರ್ ಜಿಲ್ಲೆಯ ಬಸೇರಿಯಲ್ಲಿರುವ ಬಗ್ತಾರ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಿಂದ ಬಂದಿದೆ ಎಂದು ಹೇಳಲಾಗುತ್ತದೆ.

ಈ ವರ್ಷದ ಆರಂಭದಲ್ಲಿ ನೇಪಾಳದ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಸೀಮಾ ಹೈದರ್, ತಾನು ತನ್ನ ಧರ್ಮವನ್ನು ಪರಿವರ್ತಿಸಿದ್ದೇನೆ ಎಂದು ಹೇಳಿಕೊಂಡಿದ್ದಾಳೆ ಮತ್ತು ಈಗ ಸನಾತನ ಧರ್ಮವನ್ನು ಅನುಸರಿಸುತ್ತಿದ್ದಾಳೆ. ತನ್ನ ಮಕ್ಕಳ ಹೆಸರನ್ನೂ ಬದಲಾಯಿಸಿದಳು. ಪಾಕಿಸ್ತಾನಿ ಪ್ರಜೆಯಾಗಿರುವ ಸೀಮಾ ಹೈದರ್ ಕಳೆದ ತಿಂಗಳಷ್ಟೇ ಭಾರತೀಯ ಪತಿ ಸಚಿನ್ ಜೊತೆ ತನ್ನ ಮೊದಲ ‘ಕರ್ವಾ ಚೌತ್’ ಅನ್ನು ಆಚರಿಸಿ ಸುದ್ದಿಯಲ್ಲಿದ್ದಳು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!