Sunday, September 21, 2025

ಭಾರತ-ಪಾಕಿಸ್ತಾನ ಮುಖಾಮುಖಿ: ಇಂದು ಮತ್ತೆ ನೋ ಶೇಕ್ ಹ್ಯಾಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್​ ನಲ್ಲಿಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದೆ.

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ವೇಳೆ ಸೂರ್ಯಕುಮಾರ್ ಯಾದವ್ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾಗೆ ಶೇಕ್ ಹ್ಯಾಂಡ್ ನೀಡದೆ ತೆರಳಿದ್ದಾರೆ.

https://x.com/sachin_padha/status/1969764953000435902?ref_src=twsrc%5Etfw%7Ctwcamp%5Etweetembed%7Ctwterm%5E1969764953000435902%7Ctwgr%5E8af17e9d5835bdfe2e142134ec8ecef4a09ffbbc%7Ctwcon%5Es1_&ref_url=https%3A%2F%2Fwww.india.com%2Fsports%2Fwatch-no-handshake-between-suryakumar-yadav-and-salman-ali-agha-for-second-consecutive-time-after-india-vs-pakistan-toss-asia-cup-2025-8089195%2F

ಸೆಪ್ಟೆಂಬರ್ 14 ರಂದು ನಡೆದ ಪಂದ್ಯದ ವೇಳೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಪಾಕ್ ನಾಯಕನೊಂದಿಗೆ ಶೇಕ್ ಹ್ಯಾಂಡ್ ಮಾಡಿರಲಿಲ್ಲ. ಅಷ್ಟೇ ಅಲ್ಲದೆ ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ಕೂಡ ಪಾಕ್ ಆಟಗಾರರಿಗೆ ಹಸ್ತಲಾಘವ ನೀಡದೇ ಹೊರ ನಡೆದಿದ್ದರು.ಈ ಅವಮಾನವನ್ನು ಮುಂದಿಟ್ಟು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಏಷ್ಯಾಕಪ್ ಟೂರ್ನಿಯಿಂದ ಹೊರನಡೆಯುವ ಗೊಡ್ಡು ಬೆದರಿಕೆಯೊಡ್ಡಿದ್ದರು.

ಆದರೀಗ ಮತ್ತೊಮ್ಮೆ ಸೂರ್ಯಕುಮಾರ್ ಯಾದವ್ ಪಾಕಿಸ್ತಾನ್ ತಂಡದ ನಾಯಕನಿಗೆ ಶೇಕ್ ಹ್ಯಾಂಡ್ ನೀಡದೇ ಹೊರನಡೆದು ದಿಟ್ಟ ನಿಲುವು ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ