Sunday, September 14, 2025

ಭಾರತ-ಪಾಕಿಸ್ತಾನ ಮ್ಯಾಚ್: ಶಾಸಕ ಯತ್ನಾಳ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ-ಪಾಕಿಸ್ತಾನ ಮ್ಯಾಚ್ ಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನವು ಭಾರತದ ವಿರುದ್ಧ ನಿರಂತರ ಭಯೋತ್ಪಾದನೆಯಲ್ಲಿ ತೊಡಗಿದೆ. ಅವರು ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಮತ್ತು ಆಕ್ರಮಿತ ಕಾಶ್ಮೀರವನ್ನು ಬಿಟ್ಟುಕೊಡುವವರೆಗೆ ಭಾರತವು ಪಾಕಿಸ್ತಾನದೊಂದಿಗೆ ಕ್ರಿಕೆಟ್, ಫುಟ್‌ಬಾಲ್ ಸೇರಿದಂತೆ ಯಾವುದೇ ಕ್ರೀಡೆಯನ್ನು ಆಡಬಾರದು. ಗುಂಡಿಗೆ ಗುಂಡು ಕೊಡುವ ಕೆಲಸವೇ ಆಗಬೇಕು. ಜಗತ್ತಿನ ಯಾವುದೇ ಒತ್ತಡಕ್ಕೂ ಮಣಿಯಬಾರದು ಎಂದು ಬಿಸಿಸಿಐ ನಿರ್ಧಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಇದನ್ನೂ ಓದಿ