ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಪಾಕ್ ಉದ್ವಿಗ್ನ ಸ್ಥಿತಿ ಹಿನ್ನೆಲೆ ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಿಬ್ಬಂದಿ ರಜೆಗಳನ್ನು ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಹೆಚ್‌ಎಎಲ್ ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಯಾಗಿದೆ.