ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,ಈ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ಬೈಯಪ್ಪನಹಳ್ಳಿ ಮತ್ತು ಎಂಜಿ ರೋಡ್ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಎಐ ಆಧಾರಿತ ಸುಧಾರಿತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಈ ಕ್ಯಾಮರಾಗಳು ನಿಲ್ದಾಣದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು 24/7 ನಿಗಾ ಇಡಲಿದ್ದು, ಎಐ ತಂತ್ರಜ್ಞಾನದ ಸಹಾಯದಿಂದ ಅನುಮಾನಾಸ್ಪದ ಘಟನೆಗಳು ಅಥವಾ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸಲಿವೆ.
ಈ ವ್ಯವಸ್ಥೆಯು ಅನುಮಾನಾಸ್ಪದ ವಾಹನಗಳನ್ನು ತಕ್ಷಣ ಪತ್ತೆಹಚ್ಚಿ, ಭದ್ರತಾ ಸಿಬ್ಬಂದಿಗೆ ಮಾಹಿತಿ ಒದಗಿಸಲಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಲು ಕೋರಲಾಗಿದೆ.