ಅಮೆರಿಕದಿಂದ ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ ಭಾರತ ವಿರಾಮ? ರಕ್ಷಣಾ ಸಚಿವಾಲಯ ಏನು ಹೇಳುತ್ತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಮೇಲೆ ಶೇ.50ರಷ್ಟು ತೆರಿಗೆ ಹೇರಿರುವ ಅಮೆರಿಕಕ್ಕೆ ಭಾರತ ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಈ ಬಾರಿ ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿ ಯೋಜನೆಗೆ ಭಾರತ ತಾತ್ಕಾಲಿಕ ವಿರಾಮ ಹಾಕಿದೆ ಎಂದು ಹೇಳಲಾಗಿತ್ತಿದೆ. ಆದ್ರೆ ಈ ಸುದ್ದಿ ಸುಳ್ಳು ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.

ಟ್ರಂಪ್ ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ 25% ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ ನಂತರ ಭಾರತ ಅಮೆರಿಕದಿಂದ ರಕ್ಷಣಾ ಖರೀದಿಯನ್ನು ಸ್ಥಗಿತಗೊಳಿಸಿದೆ ಎಂಬ ಮಾಧ್ಯಮ ವರದಿಗಳನ್ನು ಸಚಿವಾಲಯ ನಿರಾಕರಿಸಿದೆ.

ಅಮೆರಿಕದ ಹೊಸ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಭಾರತ ಸ್ಥಗಿತಗೊಳಿಸಿದೆ ಎಂಬ ಸುದ್ದಿಗಳು ಹರಡಿದ್ದವು. ಈ ವರದಿಗಳೆಲ್ಲ ಸುಳ್ಳು. ಖರೀದಿಯು ಕಾರ್ಯವಿಧಾನಗಳ ಪ್ರಕಾರವೇ ಮುಂದುವರಿಯಲಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!