ಹೊಸದಿಗಂತ ಡಿಜಿಟಲ್ ಡೆಸ್ಕ್ :
ಭಾರತೀಯ ಅಂಚೆ ಇಲಾಖೆಯಲ್ಲಿ 40,889 ಗ್ರಾಮೀಣ ದಖ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹತ್ತನೇ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಫೆಬ್ರವರಿ 16,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ
10,000/- ರಿಂದ 29,380/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿದಾರರನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 16,2023ರೊಳಗೆ
ಅರ್ಜಿಯನ್ನು ಸಲ್ಲಿಸಬಹುದು.