ಭಾರತ-ಕತಾರ್ ಪರಸ್ಪರ ಪೂರಕವಾಗಿವೆ, ಯಾವುದೇ ಪೈಪೋಟಿಯಿಲ್ಲ: ಪಿಯೂಶ್ ಗೋಯಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಕತಾರ್ ಪ್ರತಿಸ್ಪರ್ಧಿಗಳಲ್ಲ ಬದಲಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಪೂರಕವಾಗಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಒತ್ತಿ ಹೇಳಿದರು.

ಭಾರತ-ಕತಾರ್ ಬಿಸಿನೆಸ್ ಫೋರಂನ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಗೋಯಲ್, ಸಮೃದ್ಧಿ ಮತ್ತು ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ಎರಡೂ ರಾಷ್ಟ್ರಗಳು ಹೇಗೆ ಒಟ್ಟಾಗಿ ಕೆಲಸ ಮಾಡಬಹುದು ಎಂಬುದನ್ನು ಎತ್ತಿ ತೋರಿಸಿದರು.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ (ಡಿಪಿಐಐಟಿ) ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕತಾರ್‌ನ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶೇಖ್ ಫೈಸಲ್ ಬಿನ್ ಥಾನಿ ಬಿನ್ ಫೈಸಲ್ ಅಲ್ ಥಾನಿ ಉಪಸ್ಥಿತರಿದ್ದರು.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರ ಸಮ್ಮುಖದಲ್ಲಿ ಭಾರತ ಮತ್ತು ಕತಾರ್ ನಡುವೆ ಎರಡು ತಿಳುವಳಿಕೆ ಪತ್ರಗಳಿಗೆ ಸಹಿ ಹಾಕಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!