ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅಧಿಕೃತವಾಗಿ ಎಂಟ್ರಿಕೊಟ್ಟ ಭಾರತ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅಧಿಕೃತವಾಗಿ ಭಾರತ ತಂಡವು ಎಂಟ್ರಿ ಕೊಟ್ಟಿದೆ. ನ್ಯೂಜಿಲೆಂಡ್​ನ ಕ್ರೈಸ್ಟ್‌ ಚರ್ಚ್​ನಲ್ಲಿ ನಡೆದ ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಕಿವೀಸ್ ತಂಡ 2 ವಿಕೆಟ್​ಗಳಿಂದ ಜಯ ಸಾಧಿಸಿದೆ. ಈ ಮೂಲಕ ಭಾರತ ತಂಡವು ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

ವಾಸ್ತವವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಇಂಡಿಯಾ ಹಾಗೂ ಶ್ರೀಲಂಕಾ ನಡುವೆ ಪೈಪೋಟಿ ಏರ್ಪಟ್ಟಿತ್ತು. ಈಗಾಗಲೇ ಆಸ್ಟ್ರೇಲಿಯಾ ಫೈನಲ್​ಗೆ ಎಂಟ್ರಿಕೊಟ್ಟಿದ್ದು, ಎರಡನೇ ಫೈನಲಿಸ್ಟ್​ ಆಗಲು ಇಂಡಿಯಾ ಹಾಗೂ ಶ್ರೀಲಂಕಾ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಹೀಗಾಗಿ ಇಂಡಿಯಾ ನೇರವಾಗಿ ಅಂತಿಮ ಹಂತಕ್ಕೆ ತಲುಪಬೇಕಿದ್ದರೆ ಆಸೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು 3-0 ಅಥವಾ 3-1 ಅಂತರದಿಂದ ಗೆಲ್ಲಬೇಕಿತ್ತು.​

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿಯೇ ರೋಚಕ ಸೋಲು ಅನುಭವಿಸಿರುವ ಶ್ರೀಲಂಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಿಂದ ಹೊರಗುಳಿದಿದೆ. ಹೀಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯ ಡ್ರಾಗೊಂಡರು ಸಹ ಭಾರತ ತಂಡವು ಅಂತಿಮ ಹಂತಕ್ಕೆ ತಲುಪುವಲ್ಲಿ ಯಾವುದೇ ಅಡೆತಡೆಗಳಿಲ್ಲದಂತಾಗಲಿದೆ. ಇದೀಗ ಫೈನಲ್‌ಗೆ ತಲುಪುವ ಮೂಲಕ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!