ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರನ್ನುರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಬ್ಬಿಕೊಂಡು ಬರಮಾಡಿಕೊಂಡರು.
ಬಳಿಕ ಮೋದಿ ಜೊತೆ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಮೋದಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ನಾನು ನಿಮ್ಮೊಂದಿಗೆ ನಿರಂತರ ಸಂವಹನವನ್ನು ನಿರ್ವಹಿಸಿದ್ದೇನೆ. ನಾನು ಮೊದಲೇ ಹೇಳಿದಂತೆ, ಸಮಸ್ಯೆಗಳನ್ನು ಶಾಂತಿಯುತವಾಗಿ ಪರಿಹರಿಸುವುದರ ಬಗ್ಗೆ ನಮಗೆ ನಂಬಿಕೆಯಿದೆ. ಮಾನವೀಯ ಪ್ರಯತ್ನಗಳಿಗೆ ಆದ್ಯತೆ ನೀಡುವ ಮೂಲಕ ಶಾಂತಿ ಮತ್ತು ಸ್ಥಿರತೆಯ ಸ್ಥಾಪನೆಯನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಭವಿಷ್ಯದಲ್ಲಿ ಅದಕ್ಕೆ ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡಲು ಭಾರನೀಡಲು ವಿದೆ ಎಂದು ಹೇಳಿದ್ದಾರೆ.
ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಕಜಾನ್ ನಗರವನ್ನು ತಲುಪಿದ್ದಾರೆ. ಕಜಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬ್ರಿಕ್ಸ್ ಶೃಂಗಸಭೆಯು ಕಜಾನ್‌ನಲ್ಲಿ ಅಕ್ಟೋಬರ್ 23 ಮತ್ತು 24ರಂದು ನಡೆಯಲಿದೆ. ಶೃಂಗಸಭೆಯ ಹೊರತಾಗಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯುತ್ತಿವೆ.