ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಸಿದ್ಧ, ನಮ್ಮಲ್ಲಿ ಕ್ರೀಡಾ ಪ್ರತಿಭೆಗಳಿಗೆ ಕೊರತೆಯಿಲ್ಲ-ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2036ರಲ್ಲಿ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ನಮ್ಮ ದೇಶದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಕೊರತೆಯಿಲ್ಲ, ಮುಂಬರುವ ಒಲಿಂಪಿಕ್ಸ್‌ಗೆ 9 ವರ್ಷಗಳ ಹಿಂದೆ ದೇಶದಲ್ಲಿ ಮೀಸಲಿಟ್ಟ ಬಜೆಟ್‌ಗಿಂತ ಮೂರು ಪಟ್ಟು ಹೆಚ್ಚಿನ ಬಜೆಟ್‌ ಇರಲಿದೆ ಎಂದರು.

ಗೋವಾದ ಮಾರ್ಗಾವೋ (ಮಡಗಾಂವ್)ದ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಭಾರತೀಯ ಕ್ರೀಡೆಗಳು ಹೊಸ ಮೆರಗು ಮೂಡಿಸುತ್ತಿರುವ ಈ ಸಂದರ್ಭದಲ್ಲಿ ಗೋವಾದಲ್ಲಿ ಈ ಕ್ರೀಡಾಕೂಟಗಳು ನಡೆಯುತ್ತಿವೆ ಎಂದರು.

ಕ್ರೀಡಾ ಪಟುಗಳಿಗೆ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಯೋಜನೆಗಳಲ್ಲಿ ಬದಲಾವಣೆ ತರಲಾಗಿದೆ. ಭಾರತದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಕೊರತೆಯಿಲ್ಲ ಜೊತೆಗೆ ದೇಶವು ಹಲವಾರು ಕ್ರೀಡಾ ಚಾಂಪಿಯನ್‌ಗಳನ್ನು ಹುಟ್ಟುಹಾಕಿದ್ದು, ಕ್ರೀಡೆಯ ಪ್ರಗತಿಯಲ್ಲಿನ ಅಡೆತಡೆಗಳನ್ನು ನಿವಾರಿಸಲು ನಮ್ಮ ಸರ್ಕಾರ ಶ್ರಮಿಸಿದೆ ಎಂದು ಮೋದಿ ಹೇಳಿದರು.

ಶಾಲಾ-ಕಾಲೇಜು, ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳನ್ನು ಗುರುತಿಸಿ ವಿವಿಧ ವಿಭಾಗಗಳಲ್ಲಿ ತರಬೇತಿ ನೀಡಲಾಗುತ್ತಿದ್ದು, ಅವರ ಆಹಾರ ಮತ್ತು ತರಬೇತಿಗೆ ಸರ್ಕಾರ ಹಣ ಖರ್ಚು ಮಾಡುತ್ತಿದೆ. ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲೂ ಭಾರತದ ಅಥ್ಲೀಟ್ ಗಳು 70ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಹಿಂದಿನ ಎಲ್ಲ ದಾಖಲೆಗಳನ್ನು ಮುರಿದಿದ್ದಾರೆ. ಇದಕ್ಕೂ ಮುನ್ನ ಭಾರತ ವಿಶ್ವ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಇತಿಹಾಸ ಸೃಷ್ಟಿಸಿತ್ತು ಎಂದರು.

ಭಾರತವು 2030 ರಲ್ಲಿ ಯೂತ್ ಒಲಿಂಪಿಕ್ಸ್ ಮತ್ತು 2036 ರಲ್ಲಿ ಒಲಿಂಪಿಕ್ಸ್ ಅನ್ನು ಆಯೋಜಿಸಲು ಸಿದ್ಧವಾಗಿದೆ. ಒಲಿಂಪಿಕ್ಸ್ ನಡೆಸುವ ನಮ್ಮ ಆಶಯ ಕೇವಲ ಭಾವನೆಗಳಿಗೆ ಸೀಮಿತವಾಗಿಲ್ಲ,ಇದರ ಹಿಂದೆ ಕೆಲವು ಬಲವಾದ ಕಾರಣಗಳಿವೆ ಎಂದು ಮೋದಿ ವಿವರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!