Thursday, July 7, 2022

Latest Posts

ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ, ಭಾರತವು ಬಹುಪಕ್ಷೀಯ ವೇದಿಕೆಗಳು ಸೇರಿದಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸುವ ಕಾರ್ಯ ನಿರ್ವಹಿಸಲು ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬಿಡನ್ ಆಯೋಜಿಸಿದ್ದ ಪ್ರಜಾಪ್ರಭುತ್ವ ಶೃಂಗಸಭೆಯಲ್ಲಿ ಭಾಗವಹಿಸಿದ ಒಂದು ದಿನದ ಬಳಿಕ ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

“ಅಮೆರಿಕ ಅಧ್ಯಕ್ಷ ಬಿಡನ್ ಅವರ ಆಹ್ವಾನದ ಮೇರೆಗೆ ಪ್ರಜಾಪ್ರಭುತ್ವದ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕೆ ಸಂತೋಷವಾಗಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಬಹುಪಕ್ಷೀಯ ವೇದಿಕೆಗಳನ್ನು ಒಳಗೊಂಡಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ನಮ್ಮ ಪಾಲುದಾರರೊಂದಿಗೆ ಕೆಲಸ ಮಾಡಲು ಭಾರತ ಸಿದ್ಧವಾಗಿದೆ” ಎಂದು ಮೋದಿ ಹೇಳಿದ್ದಾರೆ.

“ಪ್ರಜಾತಾಂತ್ರಿಕ ಸಮಾಜಗಳ ಸಂರಕ್ಷಣೆಗೆ  ತಂತ್ರಜ್ಞಾನ ಸಂಸ್ಥೆಗಳು ಕೊಡುಗೆ ನೀಡಬೇಕು. ಏಕೆಂದರೆ, ತಂತ್ರಜ್ಞಾನಕ್ಕೆ ಪ್ರಜಾಪ್ರಭುತ್ವದ ಮೇಲೆ ಸಕಾರಾತ್ಮಕ ಅಥವಾ ನಕಾರಾತ್ಮಕ ಪರಿಣಾಮ ಬೀರುವ ಶಕ್ತಿ ಇದೆ. ಕಾನೂನಿನ ಆಳ್ವಿಕೆ ಮತ್ತು ಬಹುತ್ವದ ನೀತಿಯನ್ನು ಗೌರವಿಸುವುದು ಸೇರಿದಂತೆ ಪ್ರಜಾಪ್ರಭುತ್ವದ ಮನೋಭಾವವು ಭಾರತೀಯರಲ್ಲಿ ಬೇರೂರಿದೆ” ಎಂದು ಮೋದಿ ವಚ್ರ್ಯುವಲ್ ಶೃಂಗಸಭೆಯಲ್ಲಿ” ಹೇಳಿದರು.

ಬಿಡನ್‌  ಆಯೋಜಿಸಿದ್ದ ಪ್ರಜಾಪ್ರಭುತ್ವ ಶೃಂಗಸಭೆಯಲ್ಲಿ ನೂರಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss