ಹೊಸದಿಗಂತ ಆನ್ ಲೈನ್ ಡೆಸ್ಕ್:
ಕಳೆದ 24 ಗಂಟೆಗಳಲ್ಲಿ 10,584 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 78 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸೋಮವಾರ 10,584 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆಯಾಗಿದೆ. ಇವರಲ್ಲಿ 1,47,306 ಮಂದಿ ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ 13,255 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,07,12,665ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಸೋಮವಾರ ದೇಶದಲ್ಲಿ 78 ಮಂದಿ ಸೋಂಕಿತರು ಮೃತಪಟ್ಟಿದ್ದು, ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,56,463ಕ್ಕೆ ಏರಿಕೆಯಾಗಿದೆ.