Friday, June 9, 2023

Latest Posts

ಭಾರತದಲ್ಲಿ ಏರಿಕೆಯಾಯ್ತು ಕೋವಿಡ್ ಸಂಖ್ಯೆ, ಐದು ತಿಂಗಳಲ್ಲಿ ಇದೇ ಹೆಚ್ಚು!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಭಾರತದಲ್ಲಿ ಒಂದೇ ದಿನದಲ್ಲಿ 1,590 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಇದು 146 ದಿನಗಳಲ್ಲಿ ಅತಿ ಹೆಚ್ಚು ದಾಖಲಾಗಿರುವ ಪ್ರಕರಣ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 8,601ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಆರೋಗ್ಯ ಸಚಿವಾಲಯದ ವೆಬ್​ಸೈಟ್​​ನಲ್ಲಿ ನವೀಕರಿಸಿದ ಅಂಕಿಅಂಶಗಳ ಪ್ರಕಾರ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 5,30,824ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಮಹಾರಾಷ್ಟ್ರದಿಂದ ಮೂರು, ಕರ್ನಾಟಕ, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ದೈನಂದಿನ ಅಂಕಿಅಂಶಗಳ ಪ್ರಕಾರ 1.33 ಶೇಕಡಾದಷ್ಟು ಪ್ರಕರಣಗಳು ದಾಖಲಾಗಿದ್ದರೆ, ವಾರದಲ್ಲಿ ಶೇಕಡಾ 1.23 ರಷ್ಟು ಪ್ರಕರಣಗಳು ಕಂಡುಬಂದಿದೆ. ಇನ್ನೂ ಹೊಸ ಪ್ರಕರಣಗಳೊಂದಿಗೆ ಭಾರತದಲ್ಲಿನ ಕೋವಿಡ್-19‌ ಸೋಂಕಿತರ ಸಂಖ್ಯೆ 4,47,02,257 ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!