ರಷ್ಯ ವಿರುದ್ಧ ಖಂಡನಾ ನಿರ್ಣಯದ ಮತದಾನದಿಂದ ದೂರ ಉಳಿದ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಆಕ್ರಮಣವನ್ನು ಖಂಡಿಸಲು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಂಡಿಸಿದ್ದ ನಿರ್ಣಯದಲ್ಲಿ ಮತದಾನಕ್ಕೆ ಭಾರತ ಶನಿವಾರ ಗೈರು ಹಾಜರಾಗಿದೆ.
ಚೀನಾ ಕೂಡ ರಷ್ಯಾದ ವಿರುದ್ಧ ಮತದಾನದಿಂದ ದೂರ ಉಳಿದಿದೆ. ಯುಎನ್‌ಎಸ್‌ಸಿ ಸಭೆಯಲ್ಲಿ ಭಾಗವಹಿಸಿದ್ದ ಭಾರತ, ಹಿಂಸಾಚಾರ ಮತ್ತು ದ್ವೇಷವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕು ಎಂದು ಒತ್ತಾಯಿಸಿತ್ತು. ಮಾತುಕತೆ ಮೂಲಕ ಮಾತ್ರ ಈ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಭಾರತ ಹೇಳಿದೆ.

ಈ ಬೆಳವಣಿಗೆಗಳಿಂದ ಭಾರತ ವಿಚಲಿತವಾಗಿದೆ. ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಉತ್ತಮ ಮಾರ್ಗ ಕಂಡುಕೊಳ್ಳಬೇಕು. ಭಿನ್ನಾಭಿಪ್ರಾಯ ಬಗೆಹರಿಸಲು ಮಾತುಕತೆ ನಡೆಸಬೇಕು. ರಷ್ಯ ಮತ್ತು ಉಕ್ರೇನ್ ವಿಷಯದಲ್ಲಿ ರಾಜತಾಂತ್ರಿಕ ಮಾತುಕತೆಯ ಮಾರ್ಗ ಕೈಬಿಟ್ಟಿರುವುದು ವಿಷಾದದ ಸಂಗತಿ. ನಾವು ರಾಜತಂತ್ರಿಕ ಮಾರ್ಗ ಆಯ್ದುಕೊಳ್ಳಬೇಕು. ಈ ಕಾರಣದಿಂದ ನಿರ್ಣಯದಿಂದ ದೂರ ಉಳಿದಿದ್ದೇವೆ ಎಂದು ವಿಶ್ವಸಂಸ್ಥೆಯ ಭಾರತ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!