COVID UPDATE | ಭಾರತದಲ್ಲಿ 11,109 ಮಂದಿ ಕೋವಿಡ್‌ ಸೋಂಕಿತರು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 11,109 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಸದ್ಯ 49,622 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,42,16,583ಕ್ಕೆ ತಲುಪಿದ್ದು, 5,31,064 ಮಂದಿ ಮೃತಪಟ್ಟಿದ್ದಾರೆ. ಚೇತರಿಕೆ ಪ್ರಮಾಣ ಶೇ 98.71 ರಷ್ಟಿದ್ದು, ಸಾವಿನ ಪ್ರಮಾಣ ಶೇ 1.19 ರಷ್ಟಿದೆ.

ದೇಶದಲ್ಲಿ ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಜನರಲ್ಲಿ ಹೆಚ್ಚು ಆತಂಕ ಮೂಡಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!