ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ 1,41,986 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ, ಶುಕ್ರವಾರ ಒಂದೇ ದಿನ 1,41,986 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 40,895 ಮಂದಿ ಗುಣಮುಖರಾಗಿದ್ದು, ಸೋಂಕಿನಿಂದ ಚೇರತಿಸಿಕೊಂಡವರ ಸಂಖ್ಯೆ 3,44,12,740ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೋವಿಡ್ ಸಕ್ರಿಯ ಸೋಂಕಿತರ ಸಂಖ್ಯೆ 4,72,169ಕ್ಕೆ ಏರಿಕೆಯಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಪತ್ತೆಯಾದ 1,41,986 ಪ್ರಕರಣಗಳಲ್ಲಿ ಮಹಾರಾಷ್ಟ್ರ 40,925, ಪಶ್ಚಿಮಬಂಗಾಳ 18,213, ದೆಹಲಿ 17,335, ತಮಿಳುನಾಡು 8,981 ಮತ್ತು ಕರ್ನಾಟಕ 8,449 ದಾಖಲಾಗಿದೆ.
ದೇಶದಲ್ಲಿ ಇಲ್ಲಿಯವರೆಗೆ 150 ಕೋಟಿ ಕೊರೋನಾ ಡೋಸ್ ನೀಡಲಾಗಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ.