ದೇಶದಲ್ಲಿ ಮುಂದುವರಿದ ಕೊರೊನಾ: ಒಂದು ದಿನದಲ್ಲಿ 179ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 179 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಂದು ಸಾವು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 2,227 ರಷ್ಟಿದೆ.

ದೇಶಾದ್ಯಂತ ಕೋವಿಡ್ ಪ್ರಕರಣಗಳು ನಿರಂತರವಾಗಿ ಕಡಿಮೆಯಾಗುತ್ತಿದ್ದು, ಕರ್ನಾಟಕದಲ್ಲಿ 162 ಸಕ್ರಿಯ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ 1340 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 143 ಸಕ್ರಿಯ ಪ್ರಕರಣಗಳು, ಒಡಿಶಾದಲ್ಲಿ 94 ಪ್ರಕರಣಗಳು, ರಾಜಸ್ಥಾನದಲ್ಲಿ 35 ಪ್ರಕರಣಗಳು, ತಮಿಳುನಾಡಿನಲ್ಲಿ 56 ಸಕ್ರಿಯ ಪ್ರಕರಣಗಳಿವೆ; ಉತ್ತರ ಪ್ರದೇಶದಲ್ಲಿ 19 ಮತ್ತು ಪಶ್ಚಿಮ ಬಂಗಾಳದಲ್ಲಿ 52 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ದೇಶವು 1,47,467 ಪರೀಕ್ಷೆಗಳನ್ನು ನಡೆಸಿದೆ.

ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ, ದೇಶಾದ್ಯಂತ ಜನರಿಗೆ ಇದುವರೆಗೆ 220.16 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 52,577 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!