ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ನಿನ್ನೆ 18,599 ಹೊಸ ಸೋಂಕಿತರು ಪತ್ತೆಯಾಗಿದ್ದು, ಒಂದೇ ದಿನ 97 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ.
ಇದರಿಂದ ದೇಶದಲ್ಲಿನ ಕೊರೋನಾ ಸೋಂಕಿತರ ಸಂಖ್ಯೆಯು 1,12,29,398ಕ್ಕೆ ಏರಿಕೆಯಾಗಿದ್ದು, ಇವರ ಪೈಕಿ 1,88,747 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ 14,278 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,08,82,798ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ನಿನ್ನೆ 97 ಮಂದಿನ ಸೋಂಕಿಗೆ ಬಲಿಯಾಗಿದ್ದು, ಒಟ್ಟು 1,57,853 ಮಂದಿ ಬಲಿಯಾಗಿದ್ದಾರೆ.