ಮುಂದುವರಿದ ಕೊರೊನಾ ಅಬ್ಬರ: 24ಗಂಟೆಗಳಲ್ಲಿ 18,815ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 18,815 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ತಿಳಿಸಿದೆ. ಕೊರೋನಾದಿಂದ 24ಗಂಟೆಗಳಲ್ಲಿ 38 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ 1,22,335 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಧನಾತ್ಮಕತೆಯ ದರವು ಶೇಕಡಾ 4.96ರಷ್ಟಿದೆ.

ಇಲ್ಲಿಯವರೆಗೆ ದೇಶದಲ್ಲಿ ಒಟ್ಟು 4,35,85,554 ಕರೋನಾ ಪ್ರಕರಣಗಳು ಮತ್ತು 5,25,343 ಸಾವುಗಳು ವರದಿಯಾಗಿವೆ. ದೇಶದಲ್ಲಿ ಕೊರೊನಾ ಚೇತರಿಕೆ ಪ್ರಮಾಣ 98.51 ಪ್ರತಿಶತ ಎಂದು ಇಲಾಖೆ ತಿಳಿಸಿದೆ. ನಿನ್ನೆ 15,899 ಜನರು ಕರೋನಾದಿಂದ ಚೇತರಿಸಿಕೊಂಡಿದ್ದು, ಕರೋನಾದಿಂದ ಚೇತರಿಸಿಕೊಂಡ ಒಟ್ಟು ಜನರ ಸಂಖ್ಯೆ 4,29,37,876 ರಷ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!