ದೇಶದಲ್ಲಿ 2,487 ಕೋವಿಡ್‌ ಕೇಸ್‌ ಪತ್ತೆ 13 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,487 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು 13 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟೂ 17,692 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ಪ್ರಮಾಣವು 0.61% ದಷ್ಟು ದಾಖಲಾಗಿದೆ. ಚೇತರಿಕೆ ದರವು 98.74% ದಷ್ಟಿದ್ದು ಕಳೆದ 24 ಗಂಟೆಗಳಲ್ಲಿ 2,878 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ದೇಶದಾದ್ಯಂತ ಒಟ್ಟೂ 191.32 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!