ಕೊರೊನಾ ವರದಿ: ದೇಶದಲ್ಲಿ 3,011 ಹೊಸ ಕೊರೋನಾ ಪ್ರಕರಣ, 28 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದಲ್ಲಿ ಹೊಸದಾಗಿ 3011 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,45,97,498ಕ್ಕೆ ಏರಿಕೆಯಾಗಿದೆ. ಈ ಪೈಕಿ 4,40,32,671 ಮಂದಿ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೆ 5,28,701 ಮಂದಿ ಕೊರೊನಾಗೆ ಬಲಿಯಾಗಿದ್ದು, 36,126 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ 28 ಜನರು ಕೊರೊನಾದಿಂದ ಸಾವನ್ನಪ್ಪಿದ್ದರೆ, 4301 ಜನರು ವೈರಸ್‌ನಿಂದ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಟ್ಟು ಪ್ರಕರಣಗಳಲ್ಲಿ ಶೇಕಡಾ 0.08 ರಷ್ಟು ಸಕ್ರಿಯ ಪ್ರಕರಣಗಳಾಗಿವೆ. 98.73 ರಷ್ಟು ಚೇತರಿಕೆ ಪ್ರಮಾಣ ಇದೆ.

ಈವರೆಗೆ 218.77 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ತಿಳಿದುಬಂದಿದೆ. ಇದರಲ್ಲಿ 94.87 ಕೋಟಿ ಜನರು ಎರಡನೇ ಡೋಸ್ ತೆಗೆದುಕೊಂಡರೆ, 21.41 ಕೋಟಿ ಜನರು ಬೂಸ್ಟರ್ ಡೋಸ್ ತೆಗೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!