ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ನಿನ್ನೆ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, 12,286 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ 12, 286 ಹೊಸ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,11,24,527ಕ್ಕೆ ಏರಿಕೆಯಾಗಿದೆ. ಇವರಲ್ಲಿ 1,68,358 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 12,464 ಮಂದಿ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,07,98,921ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಮವಾರ 91 ಮಂದಿ ಸೋಂಕಿತರು ಬಲಿಯಾಗಿದ್ದು, ಈವರಗೂ ಒಟ್ಟು 1,57,248 ಮಂದಿ ಮೃತಪಟ್ಟಿದ್ದಾರೆ