ಇಂಡಿಯಾ ಸಭೆ: ಎಸ್ಎಡಿ, ಬಿಎಸ್ಪಿ ಪಕ್ಷ ಮೈತ್ರಿಕೂಟಕ್ಕೆ ಸೇರಿಲ್ಲ ಎಂದ ಶರದ್ ಪವಾರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ವಾಣಿಜ್ಯ ನಗರಿ ಮುಂಬೈ ಯಲ್ಲಿ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ ನಡೆಯುತ್ತಿದ್ದು, 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ

ಈ ವೇಳೆ 2020ರಲ್ಲಿ ಎನ್ ಡಿಎ ತೊರೆದ ಶಿರೋಮಣಿ ಅಕಾಲಿದಳ (ಎಸ್ಎಡಿ) ಮತ್ತು ಬಿಎಸ್ಪಿ ಎಂಬ ಎರಡು ಪಕ್ಷಗಳು ಇಂಡಿಯಾ ಮೈತ್ರಿಕೂಟಕ್ಕೆ ಸೇರುತ್ತಿಲ್ಲ. ಈ ನಿರ್ಧಾರದ ಹಿಂದೆ ಅವೆರಡಕ್ಕೂ ತಮ್ಮದೇ ಆದ ಕಾರಣಗಳಿವೆ ಎಂದು ಪವಾರ್ ತಿಳಿಸಿದ್ದಾರೆ, ಸದ್ಯ ಮೈತ್ರಿಕೂಟದ ಪಾಲುದಾರರಿಗೆ ನೋವುಂಟು ಮಾಡುವ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ.

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಯಾವ ಕಡೆ ಇದ್ದಾರೆ ಎಂಬುದು ಗೊತ್ತಾಗಿದೆ. ಅವರು ಈಗಾಗಲೇ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾದಂತೆ ವಿಷಯಗಳು ಹೆಚ್ಚು ಸ್ಪಷ್ಟವಾಗುತ್ತವೆ ಎಂದು ಪವಾರ್ ಹೇಳಿದ್ದಾರೆ.

ಎಸ್‌ಎಡಿ ನಾಯಕ ಬಲ್ವಿಂದರ್ ಸಿಂಗ್ ಭುಂದರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ತಮ್ಮ ಪಕ್ಷವನ್ನು ಸಂಪರ್ಕಿಸಲಾಗಿದೆ. ಆದರೆ, ಪಕ್ಷವು ಅದರಿಂದ ದೂರ ಉಳಿಯುತ್ತದೆ ಎಂದು ಖಚಿತಪಡಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!