COVID UPDATE| ದೇಶದಲ್ಲಿ ಏರಿಕೆಯಾಗುತ್ತಿದೆ ಕೋವಿಡ್, ಇರಲಿ ಇನ್ನಷ್ಟು ಹೆಚ್ಚು ಎಚ್ಚರಿಕೆ…

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆ ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ 226 ಹೊಸ ಪ್ರಕರಣ ಪತ್ತೆಯಾಗುವ ಮೂಲಕ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,78,424ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆಯೂ ಏರಿಕೆಯಾಗಿದ್ದು, 5,30,702 ಸಂಖ್ಯೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 179 ಮಂದಿ ಗುಣಮುಖರಾಗಿದ್ದಾರೆ.

ಜಾಗತಿಕ ಮಟ್ಟದಲ್ಲಿಯೇ ಆತಂಕ ಹೆಚ್ಚಿಸುತ್ತಿರುವ ಕೋವಿಡ್, ದೇಶದಲ್ಲಿ ನಿಧಾನವಾಗಿ ಏರಿಕೆಯಾಗುತ್ತಿರುವುದು ಅಪಾಯದ ಮುನ್ಸೂಚನೆ ನಡುತ್ತಿದ್ದು, ನಾಗರಿಕರು ಇನ್ನಷ್ಟು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಎಚ್ಚರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!