Wednesday, August 10, 2022

Latest Posts

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ: ನಿನ್ನೆ ಪತ್ತೆಯಾದ ಹೊಸ ಪ್ರಕರಣಗಳೆಷ್ಟು?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 17,404 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ದೇಶದಲ್ಲಿ 17,404 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 1,11,56,923ಕ್ಕೇರಿದೆ. ದೇಶದಲ್ಲಿ 1,73, 413 ಮಂದಿ ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ಒಂದೇ ದಿನ 14,031 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,08,26,075ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 89 ಮಂದಿ ಮೃತಪಟ್ಟಿದ್ದು, ಸೋಂಕಿಗೆ ಮೃತಪಟ್ಟಿರುವವರ ಸಂಖ್ಯೆ 1,57,435ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss