spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಅಧ್ಯಕ್ಷ ಸ್ಥಾನ: ನಾಳೆ ಅಧಿಕಾರಕ್ಕೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ನಾಳೆಯಿಂದ ಒಂದು ತಿಂಗಳ ಕಾಲ ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಲಿದ್ದು, ಈ ವೇಳೆ ಮೂರು ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಲಿದೆ.
ಈ ಬಗ್ಗೆ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಟಿ.ಎಸ್.ತಿರುಮೂರ್ತಿ ಅವರು, ಭಾರತ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ತಿಂಗಳಲ್ಲಿಯೇ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಲು ಅವಕಾಶ ಸಿಕ್ಕಿದೆ. ಇದು ನಿಜಕ್ಕೂ ಗೌರವದ ವಿಷಯ ಎಂದು ಸಂತಸ ವ್ಯಕ್ತಪಡಿಸಿದರು.
ಒಂದು ತಿಂಗಳಲ್ಲಿ ಮೂರು ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಲಿದ್ದು, ಕಡಲ ಭದ್ರತೆ, ಶಾಂತಿ ಪಾಲನೆ ಹಾಗೂ ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದ ಕಾರ್ಯಕ್ರಮ ನಡೆಸಲಿದೆ.
2022 ವರ್ಷ ಡಿಸೆಂಬರ್‌ನಲ್ಲಿ ಮತ್ತೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಗಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss