ಉಕ್ರೇನ್ ನಲ್ಲಿರುವ ಭಾರತೀಯರನ್ನು ವಾಪಾಸ್ ಕರೆತರಲು ಸರ್ಕಾರದ ಅವಿರತ ಶ್ರಮ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್ ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯರನ್ನು ವಾಪಾಸ್ ತಾಯ್ನಾಡಿಗೆ ಕರೆತರಲು ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇಂದು ಉತ್ತರ ಪ್ರದೇಶದ ಬಸ್ತಿ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಆರಂಭಿಸಿ 4 ದಿನಗಳು ಕಳೆದಿವೆ. ಭಾರತ ಎಂದಿಗೂ ಪ್ರತಿಯೊಬ್ಬ ನಾಗರಿಕನ ಜೀವನಕ್ಕೆ ಮೊದಲ ಆದ್ಯತೆ ನೀಡುತ್ತದೆ. ಯಾವುದೇ ತೊಂದರೆ ಬಂದರೂ ಕೂಡ ಜನರನ್ನು ಸುರಕ್ಷಿತವಾಗಿ ಮರಳಿ ತರಲು ಸರ್ಕಾರ ಯಾವುದೇ ಅವಕಾಶ ಬಿಟ್ಟುಕೊಟ್ಟಿಲ್ಲ. ಈಗ ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಉಕ್ರೇನ್ ನಲ್ಲಿ ಸಿಲುಕಿರುವ ಜನರನ್ನು ವಾಪಾಸ್ ಕರೆತರಲು ಹಗಲಿರುಳು ಶ್ರಮಿಸುತ್ತಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಹೆಚ್ಚಳವಾಗುತ್ತಿರುವ ನಡುವೆ ಭಾರತದಲ್ಲಿ ಎಥನಾಲ್ ತಯಾರಿಸಬಹುದಾಗಿದೆ. ಈಗಾಗಲೇ ನಮ್ಮ ಸರ್ಕಾರ ಎಥೆನಾಲ್ ಸ್ಥಾವರವನ್ನು ಸ್ಥಾಪಿಸಲಾಗುತ್ತಿದ್ದು, ಇದರಿಂದ ವಿದೇಶಿ ಆಮದು ಕಡಿಮೆಯಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!