March 21, 2026
Saturday, March 21, 2026
spot_img

ಟಿ20 ವಿಶ್ವಕಪ್ ನಲ್ಲಿ ಮೊದಲ ಪಂದ್ಯ ಗೆದ್ದ ಭಾರತಕ್ಕೆ ಶಾಕ್: ನಮೀಬಿಯಾ ವಿರುದ್ಧದ ಮ್ಯಾಚ್ ಗೆ ಅಭಿಷೇಕ್ ಡೌಟ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಪಂದ್ಯ ಗೆದ್ದ ಭಾರತ ಎಡನೆ ಪಂದ್ಯಕ್ಕೆ ರೆಡಿಯಾಗಿದ್ದು,ಈ ಆದ್ರೆ ಈ ವೇಳೆ ಟೀಂ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆ ಡೌಟ್ ಎನ್ನಲಾಗುತ್ತಿದೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ 2ನೇ ಟಿ20 ಪಂದ್ಯದಲ್ಲಿ ಆಡುವ ಸಾಧ್ಯತೆ ಕುರಿತು ತಂಡದ ಸಹಾಯಕ ಕೋಚ್ ರ್ಯಾನ್ ಟೆನ್ ಡೊಶ್ಚೆಟ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಅಭಿಷೇಕ್ ಶರ್ಮಾ ಹೊಟ್ಟೆ ನೋವು, ಅಜೀರ್ಣ ಸೇರಿದಂತೆ ಕೆಲ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಸದ್ಯದ ಪ್ರಕಾರ ಅಭಿಷೇಕ್ ಶರ್ಮಾ ನಮೀಬಿಯಾ ವಿರುದ್ದ ಪಂದ್ಯಕ್ಕೆ ಲಭ್ಯವಾಗುವ ಸಾಧ್ಯತೆ ಕಡಿಮೆ ಎಂದಿದ್ದಾರೆ.

ನಮೀಬಿಯಾ ವಿರುದ್ಧದ 2ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ ನಡೆಸಿದೆ. ಈ ವೇಳೆಯೂ ಅಭಿಷೇಕ್ ಶರ್ಮಾ ಗೈರಾಗಿದ್ದರು. ತಂಡದ ಇತರ ಸದಸ್ಯರು ಅಭ್ಯಾಸ ನಡೆಸಿದ್ದಾರೆ.

ಅಭಿಷೇಕ್ ಶರ್ಮಾ 2ನೇ ಪಂದ್ಯಕ್ಕೆ ಗೈರಾದರೆ ಈ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಅಭ್ಯಾಸದ ವೇಳೆಯೂ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಅಭ್ಯಾಸ ಮಾಡಿದ್ದಾರೆ. ಆದರೆ ಸೌತ್ ಆಫ್ರಿಕಾ ಸರಣಿಯಲ್ಲಿ ಸಂಜು ಸ್ಯಾಮ್ಸನ್ ರನ್ ಸಿಡಿಸುವಲ್ಲಿ ವಿಫಲರಾಗಿದ್ದಾರೆ. ಸ್ಪಿನ್ ಆಯ್ಕೆಯನ್ನು ಟೀಂ ಇಂಡಿಯಾ ಪರಿಗಣಿಸಿದರೆ ವಾಶಿಂಗ್ಟನ್ ಸುಂದರ್ ಆಯ್ಕೆಯಾಗುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !