ಭಾರತ ಪಾಕ್ ಜೊತೆ ಕ್ರಿಕೆಟ್ ಆಡಲೇಬಾರದು, ಆಡಿದರೆ ಹೀನಾಯವಾಗಿ ಸೋಲಿಸಬೇಕು: ಸ್ಪೀಕರ್ ಯು. ಟಿ. ಖಾದರ್

ಹೊಸದಿಗಂತ ವರದಿ, ಮಂಗಳೂರು:

ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾನುವಾರ ನಡೆಯುವ ಭಾರತ – ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಾಟದ ಕುರಿತು ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಪ್ರತಿಕ್ರಿಯಿಸಿದ್ದು, ‘ಪಾಕಿಸ್ತಾನದ ಜೊತೆ ನಾವು ಕ್ರಿಕೆಟ್ ಆಟ ಆಡಲೇಬಾರದು’ ಎಂದಿದ್ದಾರೆ.

ಟಿ20 ಮ್ಯಾಚ್ ನಡೆಯುತ್ತಿರುವುದು ಸಂತೋಷದ ವಿಚಾರ. ನಾನು ಸಹ ಕ್ರಿಕೆಟ್ ಆಟಗಾರ ಮತ್ತು ಅಭಿಮಾನಿ. ಅದಕ್ಕಿಂತ ಮಿಗಿಲಾಗಿ ನಾನು ಭಾರತ ದೇಶದ ಪ್ರಜೆ. ನಾವು ಪಾಕಿಸ್ತಾನದ ಜೊತೆ ಕ್ರಿಕೆಟ್ ಆಟ ಆಡಲೇಬಾರದು. ಪಾಕಿಸ್ತಾನದವರು ಇಲ್ಲಿ ಬಂದಾಗ ವಿರೋಧಿಸಿದ್ದನ್ನು ನೋಡಿದ್ದೇವೆ. ಭಾರತ ದೇಶದಲ್ಲಿ ಅವರ ಜತೆ ಪಂದ್ಯ ಬ್ಯಾನ್ ಮಾಡಲಾಗಿದೆ. ಆಗಿದ್ದೂ ಹೊರದೇಶದಲ್ಲಿ ಯಾಕೆ ಆಟ ಆಡಿಸಬೇಕು. ಅವರು ಸರಿಯಾಗುವ ತನಕ ಅವರ ಜತೆ ಪಂದ್ಯ ಆಡುವುದೇ ಬೇಡ. ಇದು ನನ್ನ ವೈಯಕ್ತಿಕ ಅಂತರಾಳದ ಅನಿಸಿಕೆ ಎಂದಿದ್ದಾರೆ.

ಒಂದು ವೇಳೆ ಬಾಂಧವ್ಯ ಸರಿಯಾಗಿದ್ದರೆ ಮತ್ತೆ ನಮ್ಮಲ್ಲಿ ಯಾಕೆ ಆಡುವುದಿಲ್ಲ?  ಮ್ಯಾಚ್ ಆಯೋಜಿಸುವವರು ಈ ರೀತಿಯ ಗೊಂದಲ ಮಾಡಬಾರದು. ಈಗ ಆಟ ಆಡಲೇಬೇಕು ಎಂದು ನಿರ್ಧಾರವಾಗಿದೆ. ಭಾರತ ದೇಶ ಟಿ20 ವಿಶ್ವಕಪ್ ಗೆಲ್ಲಬೇಕು. ಗೆಲುವಷ್ಟೇ ಅಲ್ಲ, ಗೌರವದ ಗೆಲುವಾಗಬೇಕು. ಪಾಕಿಸ್ತಾನವನ್ನು ಸೋಲಿಸುವುದು ಮಾತ್ರವಲ್ಲ, ಅವರನ್ನು ಹೀನಾಯವಾಗಿ ಸೋಲಿಸಬೇಕು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!