ಚೀನಾಕ್ಕೆ ಗುದ್ದು ಕೊಟ್ಟ ಭಾರತ: ಪ್ರವಾಸಿ ವೀಸಾ ಅಮಾನತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತ ಚೀನಾಕ್ಕೆ ನಡುವಿನ ಶೀತಲ ಸಮರ ನಡೆಯುತ್ತಲ್ಲೇ ಇದ್ದು, ಇದೀಗ ಭಾರತವು ಚೀನಾದ ಪ್ರಜೆಗಳ ಪ್ರವಾಸಿ ವೀಸಾಗಳನ್ನು ಅಮಾನತುಗೊಳಿಸಿದೆ.
ಚೀನಾದಲ್ಲಿ ಅಧ್ಯಯನ ನಡೆಸುತ್ತಿದ್ದ 22 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಚೀನಾಕ್ಕೆ ಮರಳಲು ಅವಕಾಶ ನೀಡುತ್ತಿಲ್ಲ. ಹೀಗಾಗಿ ಭಾರತ ಈ ನಿರ್ಧಾರ ಕೈಗೊಂಡಿದೆ.
ಜಾಗತಿಕ ವಿಮಾನಯಾನ ಸಂಸ್ಥೆ (IATA) ಪ್ರಕಾರ, ಕೊರೋನಾದಿಂದಾಗಿ 22 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಚೀನಾದಿಂದ ಮರಳಿದ್ದರು. ಈಗ ಈ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಲು ಚೀನಾಕ್ಕೆ ಹಿಂತಿರುಗಬೇಕಾಗಿತ್ತು. ಆದರೆ ಚೀನಾದ ಆಡಳಿತವು ಈ ವಿದ್ಯಾರ್ಥಿಗಳಿಗೆ ಹಿಂತಿರುಗಲು ಅವಕಾಶ ನೀಡುತ್ತಿಲ್ಲ. ಈ ವಿದ್ಯಾರ್ಥಿಗಳನ್ನು ವೇಯ್ಟಿಂಗ್ ಲಿಸ್ಟ್ ನಲ್ಲಿ ಇರಿಸಿದೆ. ಈ ಹಿನ್ನೆಲೆ ಚೀನಾದ ಪ್ರಜೆಗಳಿಗೆ ಭಾರತ ನೀಡುವ ಪ್ರವಾಸಿ ವೀಸಾಗಳು ಇನ್ನು ಮುಂದೆ ಮಾನ್ಯವಾಗಿಲ್ಲ ಎಂದು ಐಎಟಿಎ ಹೇಳಿದೆ.
ಆದರೆ ಭಾರತ ಚೀನಾದ ಪ್ರಜೆಗಳಿಗೆ ವ್ಯಾಪಾರ, ಉದ್ಯೋಗ, ರಾಜತಾಂತ್ರಿಕ ಮತ್ತು ಅಧಿಕೃತ ವೀಸಾಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ.
ಐಎಟಿಎ ಪ್ರಕಾರ, ಭೂತಾನ್, ನೇಪಾಳ, ಮಾಲ್ಡೀವ್ಸ್‌ನಿಂದ ನಿವಾಸ ಪರವಾನಗಿ ಹೊಂದಿರುವ ಪ್ರಯಾಣಿಕರು, ಭಾರತದಿಂದ ನೀಡಲಾದ ವೀಸಾ ಅಥವಾ ಇ-ವೀಸಾ ಹೊಂದಿರುವ ಪ್ರಯಾಣಿಕರು, ಭಾರತದ ಸಾಗರೋತ್ತರ ನಾಗರಿಕ (OCI) ಕಾರ್ಡ್‌ಗಳು ಅಥವಾ ಬುಕ್‌ಲೆಟ್‌ಗಳನ್ನು ಹೊಂದಿರುವ ಪ್ರಯಾಣಿಕರು, ಭಾರತೀಯ ಮೂಲದ ವ್ಯಕ್ತಿ (PIO) ಕಾರ್ಡ್ ಹೊಂದಿರುವ ಪ್ರಯಾಣಿಕರು ಮತ್ತು ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವ ಪ್ರಯಾಣಿಕರಿಗೆ ಭಾರತಕ್ಕೆ ಭೇಟಿ ನೀಡಲು ಅವಕಾಶವಿದೆ. ಆದರೆ 10 ವರ್ಷಗಳ ಮಾನ್ಯತೆ ಹೊಂದಿರುವ ಪ್ರವಾಸಿ ವೀಸಾಗಳು ಇನ್ನು ಮುಂದೆ ಮಾನ್ಯವಾಗಿಲ್ಲ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!