Sunday, April 18, 2021

Latest Posts

ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ನಂಬರ್​ 1 ಸ್ಥಾನಕ್ಕೆ ಲಗ್ಗೆ ಇಟ್ಟ ಭಾರತ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪ್ರವಾಸಿ ಇಂಗ್ಲೆಂಡ್​ ವಿರುದ್ಧ ನಡೆದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಗೆಲುವು ದಾಖಲು ಮಾಡುವ ಮೂಲಕ ಭಾರತ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ನಂಬರ್​ 1 ಸ್ಥಾನಕ್ಕೆ ಲಗ್ಗೆ ಹಾಕಿದೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತಯಾವುದೇ ವಿಕೆಟ್ ನಷ್ಟವಿಲ್ಲದೆ ಗೆಲುವುಸಾಧಿಸಿದ್ದು, ಈ ಮೂಲಕ ಟೀಂ ಇಂಡಿಯಾ 2-1 ಅಂತರದ ಮುನ್ನಡೆ ಪಡೆದುಕೊಂಡಿದ್ದು, ಈ ಮೂಲಕ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ನಂಬರ್​ 1 ಸ್ಥಾನಕ್ಕೇರಿದೆ.
ಇನ್ನು ಚಾಂಪಿಯನ್​ಶಿಪ್​ನ ಫೈನಲ್​ನಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಭಾರತ ಸೆಣಸಾಟ ನಡೆಸಬೇಕಾದರೆ ಮುಂದಿನ ಪಂದ್ಯದಲ್ಲಿ ಡ್ರಾ ಸಾಧಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಒಂದು ವೇಳೆ ಕೊಹ್ಲಿ ಪಡೆ ಪಂದ್ಯ ಕೈಚೆಲ್ಲಿದ್ರೆ ಆಸ್ಟ್ರೇಲಿಯಾ ಅವಕಾಶ ಪಡೆದುಕೊಳ್ಳಲಿದೆ. ಇನ್ನು 64.1 ಪಾಯಿಂಟ್​ ಹೊಂದಿರುವ ಇಂಗ್ಲೆಂಡ್ ರೇಸ್​ನಿಂದ ಹೊರಬಿದ್ದಿದೆ.
ಸದ್ಯ ಟೀಂ ಇಂಡಿಯಾ ಪಾಯಿಂಟ್ ಪಟ್ಟಿಯಲ್ಲಿ 71.0 ಪಾಯಿಂಟ್​ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ನ್ಯೂಜಿಲ್ಯಾಂಡ್​ 70.0 ಅಂಕಗಳೊಂದಿಗೆ ಎರಡನೇ ಸ್ಥಾನ ಹಾಗೂ 69.2 ಪಾಯಿಂಟ್​​ಗಳೊಂದಿಗೆ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡರೆ ಆಸ್ಟ್ರೇಲಿಯಾ ನೇರವಾಗಿ ಪ್ರವೇಶ ಪಡೆದುಕೊಂಡು ನ್ಯೂಜಿಲ್ಯಾಂಡ್​ ವಿರುದ್ಧ ಸೆಣಸಾಟ ನಡೆಸಲಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss