Friday, November 14, 2025

IND vs SA 1st Test: ಇಂದಿನಿಂದ ಭಾರತ- ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 14 ರಂದು ಆರಂಭವಾಗಲಿದೆ.

ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ಮ್ಯಾಚ್ ಶುರುವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ನಾಲ್ಕನೇ ಆವೃತ್ತಿಯ ಸಂದರ್ಭದಲ್ಲಿ ಈ ಸರಣಿಯು ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ.

2025 ರಲ್ಲಿ ತವರಿನಲ್ಲಿ ನಡೆಯುವ ತಮ್ಮ ಕೊನೆಯ ಟೆಸ್ಟ್ ಸರಣಿಯಲ್ಲಿ ಭಾರತೀಯ ತಂಡವು ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಲಿದೆ, ನಾಯಕ ಶುಭ್​ಮನ್ ಗಿಲ್ ಮಹತ್ವದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಅತ್ತ ಪಾಕಿಸ್ತಾನ ಪ್ರವಾಸವನ್ನು ಮುಗಿಸಿ ಭಾರತಕ್ಕೆ ಮರಳಿರುವ ದಕ್ಷಿಣ ಆಫ್ರಿಕಾ ತಂಡಕ್ಕೂ ಈ ಸರಣಿಯು ನಿರ್ಣಾಯಕವಾಗಿದೆ.

ಮೊದಲ ಟೆಸ್ಟ್ ಪಂದ್ಯ ಬೆಳಿಗ್ಗೆ 9:30 ಕ್ಕೆ ಆರಂಭವಾಗಲಿದೆ. ಟಾಸ್ ಬೆಳಿಗ್ಗೆ 9:00 ಗಂಟೆಗೆ ನಡೆಯಲಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು, ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಆನಂದಿಸಬಹುದು.

error: Content is protected !!