Thursday, November 6, 2025

ಭಾರತ–ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ: ಟೀಂ ಇಂಡಿಯಾ ತಂಡದ ಘೋಷಣೆಗೆ ಕೌಂಟ್‌ಡೌನ್ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ (Team India) ಐದು ಪಂದ್ಯಗಳ ಟಿ20 ಸರಣಿಯನ್ನು ಮುಗಿಸಿಕೊಂಡು ತವರಿಗೆ ವಾಪಸ್ಸಾಗಲಿದೆ. ಅದರ ನಂತರ ಭಾರತ ತನ್ನ ನೆಲದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಇದು 4ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ (WTC) ಅಡಿಯಲ್ಲಿ ಭಾರತದ ಮೂರನೇ ಟೆಸ್ಟ್ ಸರಣಿ ಆಗಿದ್ದು, ಇಂಗ್ಲೆಂಡ್‌ ವಿರುದ್ಧ 2-2 ಅಂತರದಲ್ಲಿ ಡ್ರಾ ಮತ್ತು ವೆಸ್ಟ್‌ ಇಂಡೀಸ್ ವಿರುದ್ಧ 2-0 ಅಂತರದ ವೈಟ್‌ವಾಶ್‌ನಿಂದ ಉತ್ತಮ ಪ್ರಾರಂಭ ಪಡೆದಿದೆ. ಪ್ರಸ್ತುತ ಭಾರತ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಈ ಸರಣಿಯಲ್ಲಿ 2-0 ಅಂತರದಲ್ಲಿ ಗೆದ್ದರೆ ಎರಡನೇ ಸ್ಥಾನ ತಲುಪುವ ಅವಕಾಶವಿದೆ.

ವರದಿಗಳ ಪ್ರಕಾರ, ದೇಶೀಯ ರಣಜಿ ಟ್ರೋಫಿ ಪಂದ್ಯಗಳು ಈಗ ಮುಗಿದಿರುವುದರಿಂದ ಆಯ್ಕೆ ಸಮಿತಿಗೆ ಆಟಗಾರರ ಆಯ್ಕೆ ಸುಲಭವಾಗಿದೆ. ಮುಂದಿನ 72 ಗಂಟೆಗಳಲ್ಲಿ ಟೆಸ್ಟ್ ತಂಡವನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಉಳಿದಂತೆ ಏಕದಿನ ಹಾಗೂ ಟಿ20 ತಂಡವನ್ನು ನವೆಂಬರ್ ಮೂರನೇ ವಾರದಲ್ಲಿ ಪ್ರಕಟಿಸಲಾಗುತ್ತದೆ.

ಮೊದಲ ಟೆಸ್ಟ್ ಪಂದ್ಯ ನವೆಂಬರ್ 14 ರಂದು, ಎರಡನೇ ಟೆಸ್ಟ್ ಪಂದ್ಯ ನವೆಂಬರ್ 22 ರಂದು ನಡೆಯಲಿದೆ. ಈ ವೇಳೆ ಭಾರತದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಆಸ್ಟ್ರೇಲಿಯಾದಲ್ಲಿದ್ದು, ಅವರು ನಾಯಕ ಶುಭ್‌ಮನ್ ಗಿಲ್ ಮತ್ತು ಮಾರ್ಗದರ್ಶಕ ಗೌತಮ್ ಗಂಭೀರ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಚರ್ಚೆಯ ನಂತರ ತಂಡದ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು.

ರಿಷಭ್ ಪಂತ್: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ನಾರಾಯಣ್ ಜಗದೀಶನ್ ಇದ್ದ ಸ್ಥಳವನ್ನು ರಿಷಭ್ ಪಂತ್ ಹಿಡಿಯುವ ಸಾಧ್ಯತೆ ಇದೆ. ಗಾಯದಿಂದ ಚೇತರಿಸಿಕೊಂಡು ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಾಪಸ್ಸಾಗುತ್ತಿದ್ದಾರೆ.

ಮೊಹಮ್ಮದ್ ಶಮಿ: ಪ್ರಸಿದ್ಧ್ ಕೃಷ್ಣ ಬದಲಿಗೆ ಶಮಿಯನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಅನುಭವ ಮತ್ತು ವೇಗದ ಬೌಲಿಂಗ್‌ನಲ್ಲಿ ಶಮಿ ಪ್ರಮುಖ ಪಾತ್ರ ವಹಿಸಬಹುದು.

ಅದೇ ರೀತಿ, ಸಾಯಿ ಸುದರ್ಶನ್ ಬದಲಿಗೆ ಕರುಣ್ ನಾಯರ್ಗೆ ಅವಕಾಶ ಸಿಗುತ್ತದೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇಂಗ್ಲೆಂಡ್ ಪ್ರವಾಸದ ನಂತರ ಅವರನ್ನು ಕೈಬಿಟ್ಟರೂ, ರಣಜಿಯಲ್ಲಿ ದ್ವಿಶತಕ ಬಾರಿಸಿ ಮತ್ತೆ ಆಯ್ಕೆಗೆ ಅರ್ಹರಾಗಿದ್ದಾರೆ.

ಶುಭ್‌ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

error: Content is protected !!