Thursday, July 7, 2022

Latest Posts

ಭಾರತ- ಶ್ರೀಲಂಕಾ ಎರಡನೇ ಟಿ-20 ಪಂದ್ಯ: ಟೀಂ ಇಂಡಿಯಾದಲ್ಲಿ ಹೊಸ ಮುಖಗಳಿಗೆ ಅವಕಾಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಭಾರತ- ಶ್ರೀಲಂಕಾ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ನಾಯಕ ದಸುನ್ ಶನಕಾ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಕೊರೋನಾ ಭೀತಿಯ ನಡುವೆ ಪಂದ್ಯ ನಡೆಯುತ್ತಿರುವ ಕಾರಣ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಇಂದಿನ ಪಂದ್ಯಕ್ಕೆ ದೇವದತ್ ಪಡಿಕ್ಕಲ್‌, ಋತುರಾಜ್ ಗಾಯಕ್ವಾಡ್, ನಿತೇಶ್ ರಾಣಾ ಹಾಗು ಚೇತನ್ ಸಕಾರಿಯಾ ಚೊಚ್ಚಲ ಅವಕಾಶ ಪಡೆದಿದ್ದಾರೆ.
ಆಲ್​ರೌಂಡರ್ ಕೃನಾಲ್ ಪಾಂಡ್ಯಾಗೆ ಕೊರೋನಾ ಸೋಂಕು ದೃಢಗೊಳ್ಳುತ್ತಿದ್ದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರಿಗೂ ಆರ್​ಟಿ-ಪಿಸಿಆರ್​ ಟೆಸ್ಟ್​ ಮಾಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ ಎರಡು ಪಂದ್ಯಗಳಿಂದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್​ ಯಾದವ್​, ಪೃಥ್ವಿ ಶಾ, ದೀಪಕ್​ ಚಹರ್​, ಕೆ.ಗೌತಮ್​, ಇಶಾನ್​ ಕಿಶನ್​, ಯಜುವೇಂದ್ರ ಚಹಲ್​ ತಂಡದಿಂದ ಹೊರಗುಳಿಯಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss