ಭಾರತ- ಶ್ರೀಲಂಕಾ ಸರಣಿ: ಪರಿಸ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತಕ್ಕೆ ಆಗಮಿಸಲಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಬಿಸಿಸಿಐ ಪ್ರವಾಸದ ಪರಿಸ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಈ ಹಿಂದಿನ ವೇಳಾಪಟ್ಟಿ ಪ್ರಕಾರ ಮೊದಲು ಟೆಸ್ಟ್​ ಸರಣಿ ಮತ್ತು ನಂತರ ಟಿ-20 ಸರಣಿ ಇತ್ತು. ಇದೀಗ ಪರಿಸ್ಕೃತ ವೇಳಾ ಪಟ್ಟಿಯಲ್ಲಿ ಮೊದಲು 3 ಪಂದ್ಯಗಳ ಟಿ-20 ಸರಣಿ ಮತ್ತು ನಂತರ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಫೆಬ್ರವರಿ 24ರಂದು ಲಖನೌದಲ್ಲಿ ಮೊದಲ ಟಿ-20, ಫೆ.26 ಮತ್ತು 27ರಂದು ಧರ್ಮಶಾಲದಲ್ಲಿ ಕೊನೆಯ ಎರಡು ಟಿ-20 ಪಂದ್ಯಗಳು ನಡೆಯಲಿವೆ. ನಂತರ 2021-23ರ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಭಾಗವಾಗಿ 2 ಪಂದ್ಯಗಳ ಟೆಸ್ಟ್​ ಸರಣಿ ನಡೆಯಲಿದೆ.
ಮೊದಲ ಟೆಸ್ಟ್​ ಪಂದ್ಯ ಮಾರ್ಚ್​ 4ರಿಂದ 8ರವರೆಗೆ ಮೊಹಾಲಿಯಲ್ಲಿ ನಡೆಯಲಿದೆ. 2ನೇ ಟೆಸ್ಟ್​ ಪಂದ್ಯ ಮಾರ್ಚ್​ 12ರಿಂದ 16ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ಇದು ಡೇ ಅಂಡ್ ನೈಟ್ ಟೆಸ್ಟ್​ ಪಂದ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!