Tuesday, December 30, 2025

ಭಾರತ-ಶ್ರೀಲಂಕಾ ಮಹಿಳಾ ಟಿ20 ಮ್ಯಾಚ್: ಸ್ಮೃತಿ ಮಂಧಾನ, ರೇಣುಕಾ ಸಿಂಗ್ ಗೆ ರೆಸ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಶ್ರೀಲಂಕಾ ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಭಾರತ ಇದುವರೆಗೆ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಆಡಿರುವ ನಾಲ್ಕು ಪಂದ್ಯಗಳಲ್ಲಿ ಶ್ರೀಲಂಕಾವನ್ನು ಸೋಲಿಸಿದೆ. ಹೀಗಾಗಿ ಈ ಪಂದ್ಯ ಟೀಂ ಇಂಡಿಯಾಕ್ಕೆ ಕೇವಲ ಔಪಚಾರಿಕ ಪಂದ್ಯವಾಗಿದೆ. ಇತ್ತ ಶ್ರೀಲಂಕಾ ಕೊನೆಯ ಪಂದ್ಯವನ್ನಾದರೂ ಗೆದ್ದು ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಲು ನೋಡುತ್ತಿದೆ.

ಟೀಂ ಇಂಡಿಯಾ ಪರ ಜಿ ಕಮಲಿನಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಸ್ಮೃತಿ ಮಂಧಾನ ಮತ್ತು ರೇಣುಕಾ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕಮಲಿನಿ ಜೊತೆಗೆ, ಸ್ನೇಹ್ ರಾಣಾ ಅವರಿಗೆ ಕೂಡ ಆಡುವ ಅವಕಾಶ ನೀಡಲಾಗಿದೆ. ಏತನ್ಮಧ್ಯೆ, ಶ್ರೀಲಂಕಾ ತಂಡವು ಆಡುವ ಹನ್ನೊಂದರಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ.

ಉಭಯ ತಂಡಗಳು
ಭಾರತ ತಂಡ: ಶಫಾಲಿ ವರ್ಮಾ, ಜಿ ಕಮಲಿನಿ, ರಿಚಾ ಘೋಷ್ (ವಿಕೆಟ್ ಕೀಪರ್), ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಅಮಂಜೋತ್ ಕೌರ್, ಸ್ನೇಹ ರಾಣಾ, ಅರುಂಧತಿ ರೆಡ್ಡಿ, ವೈಷ್ಣವಿ ಶರ್ಮಾ, ಶ್ರೀ ಚರಣಿ.

ಶ್ರೀಲಂಕಾ ತಂಡ: ಹಾಸಿನಿ ಪೆರೇರಾ, ಚಮರಿ ಅಟಾಪಟ್ಟು (ನಾಯಕ), ಇಮಿಶಾ ದುಲಾನಿ, ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ನೀಲಾಕ್ಷಿಕಾ ಸಿಲ್ವಾ, ರಶ್ಮಿಕಾ ಸೇವಂಡಿ, ಕೌಶಾನಿ ನುತ್ಯಂಗನಾ (ವಿಕೆಟ್‌ಕೀಪರ್), ನಿಮಾಶಾ ಮದುಶಾನಿ, ಇನೋಕಾ ರಣವೀರ, ಮಾಲ್ಕಿ ಮಾದರ.

error: Content is protected !!