COVID UPDATE | ಮೂಗಿನ ಮೂಲಕ ಕೋವಿಡ್ ಲಸಿಕೆ: ಕೇಂದ್ರದ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್‌
ವಿಶ್ವದಲ್ಲಿ ಕೋವಿಡ್ ತಾಂಡವ ಕಾಣಿಸಿಕೊಂಡ ಬೆನ್ನಲ್ಲೇ ಅಲರ್ಟ್ ಆಗಿರುವ ಕೇಂದ್ರ ಸರ್ಕಾರ ಮೂಗಿನ ಮೂಲಕ ಬಳಸುವ ಲಸಿಕೆಗೆ ಗ್ರೀನ್ ಸಿಗ್ನಲ್ ನೀಡಿದೆ.
ವಯಸ್ಕರಿಗೆ ಬೂಸ್ಟರ್ ಡೋಸ್ ಆಗಿ ಲಸಿಕೆ ಕಾರ್ಯಕ್ರಮದಲ್ಲಿ ಇಂಟ್ರಾನಾಸಲ್ ಕೋವಿಡ್ ಲಸಿಕೆ (ಮೂಗಿನ ಮೂಲಕ ಲಸಿಕಾಕರಣ)ಯನ್ನು ಸೇರಿಸಲು ಸರ್ಕಾರ ಇಂದು ಅನುಮೋದನೆ ನೀಡಿದೆ. ಚೀನಾ ಮತ್ತು ಇತರ ಕೆಲವು ದೇಶಗಳಲ್ಲಿ ಪ್ರಕರಣಗಳ ಉಲ್ಬಣವಾಗುತ್ತಿರುವುದರಿಂದ ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.
‌ಭಾರತ-ನಿರ್ಮಿತ ಇನ್‌ಕೋವ್ಯಾಕ್ (iNCOVACC) ಲಸಿಕೆಯನ್ನು ಇಂದು ಸಂಜೆ Co-WIN ಪ್ಲಾಟ್‌ಫಾರ್ಮ್‌ನಲ್ಲಿ ಪರಿಚಯಿಸಲಾಗುವುದು.
ಭಾರತ್ ಬಯೋಟೆಕ್ ತಯಾರಿಸಿದ ಲಸಿಕೆ ಸದ್ಯಕ್ಕೆ ಖಾಸಗಿ ಕೇಂದ್ರಗಳಲ್ಲಿ ಮಾತ್ರ ಲಭ್ಯವಿರುತ್ತದೆ. ಇದು ಎರಡು-ಡ್ರಾಪ್ ಮೂಗಿನ ಲಸಿಕೆಯಾಗಿದ್ದು, ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ತೆಗೆದುಕೊಂಡವರು ಮೂಗಿನ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ತೆಗೆದುಕೊಳ್ಳಬಹುದು.
ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗಾಗಿ ಸೂಜಿ-ಮುಕ್ತ ಈ ಲಸಿಕೆಯು ಕಳೆದ ನವೆಂಬರ್‌ನಲ್ಲಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಅನುಮೋದನೆಯನ್ನು ಪಡೆದಿತ್ತು. “ಸಾಂಕ್ರಾಮಿಕ ರೋಗವು ಇನ್ನೂ ಮುಗಿದಿಲ್ಲ. ಹಬ್ಬದ ಸಮಯದಲ್ಲಿ, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆರೋಗ್ಯ ಸಚಿವಾಲಯ ಕರೆನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!