ಮಾಲ್ಡೀವ್ಸ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ಬಗ್ಗೆ ಮಾಲ್ಡೀವ್ಸ್ ಸಚಿವರು ನೀಡಿರುವ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಮಾಲ್ಡೀವ್ಸ್ ರಾಯಭಾರಿಗೆ ಸಮನ್ಸ್ ನೀಡಲಾಗಿದೆ.

ಮಾಲ್ಡೀವ್ಸ್ ಹೇಳಿಕೆಗಳಿಂದ ಎರಡು ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಇಂದು ಮಾಲ್ಡೀವ್ಸ್ ರಾಯಭಾರಿ ಇಬ್ರಾಹಿಂ ಶಾಹಿಬ್‌ಗೆ ಸಮನ್ಸ್ ನೀಡಲಾಗಿದೆ.

ದೆಹಲಿಯ ಸೌತ್ ಬ್ಲಾಕ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಇಬ್ರಾಹಿಂದ ಶಾಹಿಬ್ ತೆರಳಿದ್ದು, ಸಚಿವರ ಹೇಳಿಕೆಗಳ ಬಗ್ಗೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!