ರಷ್ಯಾದಿಂದ ಭಾರತ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿ: ಅಮೆರಿಕ ಹೇಳುವುದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಷ್ಯಾದಿಂದ ಭಾರತವು ರಿಯಾಯಿತಿ ದರದಲ್ಲಿಕಚ್ಚಾ ತೈಲವನ್ನು ಪಡೆದುಕೊಳ್ಳುವುದು ರಷ್ಯಾ ಮೇಲೆ ಅಮೆರಿಕ ಹೇರಿರುವ ನಿರ್ಬಂಧಗಳ ಉಲ್ಲಂಘನೆಯಲ್ಲ ಎಂದು ಅಮೆರಿಕಾ ಸ್ಪಷ್ಟಪಡಿಸಿದೆ.
ರಷ್ಯಾದ ತೈಲವನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಚಿಂತನೆಯ ವರದಿಗಳ ಬಗ್ಗೆ ಪ್ರತಿಕ್ರಿಯಿಸಿರುವ ವೈಟ್‌ಹೌಸ್‌ನ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ, ಭಾರತ ತೈಲ ಖರೀದಿಸಲು ಮುಂದಾಗುವುದು ನಿರ್ಬಂಧಗಳನ್ನು ಉಲ್ಲಂಘಿಸಿದಂತೆ ಆಗುತ್ತದೆ ಎಂದು ನನಗನಿಸುತ್ತಿಲ್ಲ ಎಂದು ಹೇಳಿದ್ದಾರೆ.
ರಷ್ಯಾದ ಮೇಲಿನ ನಿರ್ಬಂಧಗಳು ಮೊದಲಿನಂತೆ ಮುಂದುವರಿಯುತ್ತವೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಬೆಂಬಲಿಸಲಿಲ್ಲ. ಮಾತುಕತೆಯ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವಂತೆ ಎಲ್ಲ ಮಧ್ಯಸ್ಥಗಾರರನ್ನು ನಿರಂತರವಾಗಿ ಕೇಳಿಕೊಂಡಿದೆ. ಆದರೂ ರಷ್ಯಾ ವಿರುದ್ಧದ ಎಲ್ಲ ವಿಶ್ವಸಂಸ್ಥೆಯ ನಿರ್ಣಯಗಳಲ್ಲಿ ಅದು ದೂರವಿತ್ತು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!