ನ್ಯೂಜಿಲೆಂಡ್, ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡ ಪ್ರಕಟ, ಈ ಪ್ಲೇಯರ್‌ಗಿಲ್ಲ ಅವಕಾಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟಿಸಿದ್ದು, ಕೆ.ಎಲ್ ರಾಹುಲ್‌ಗೆ ಕೊಕ್ ನೀಡಲಾಗಿದೆ. ಹೌದು, ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಹಾಗೂ ಟಿ20 ಸರಣಿ, ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ.

ಏಕದಿನ ಮತ್ತು ಟೆಸ್ಟ್ ತಂಡವನ್ನುನಾಯಕ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ, ಟಿ 20 ಪಂದ್ಯಗಳನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

ಈ ಬಾರಿ ಕೆ.ಎಲ್. ರಾಹುಲ್ ಬದಲು ಕೆ.ಎಸ್ ಭರತ್‌ಗೆ ಅವಕಾಶ ನೀಡಲಾಗಿದೆ. ವಿಕೆಟ್ ಕೀಪರ್ ಆಗಿ ಭರತ್ ಆಡಲಿದ್ದಾರೆ. ಅಕ್ಷರ್ ಪಟೇಲ್‌ಗೆ ವಿಶ್ರಾಂತಿ ನೀಡಲಾಗಿದ್ದು, ಶಹಬಾಜ್ ಅಹಮದ್ ಕೂಡ ತಂಡದಲ್ಲಿದ್ದಾರೆ.
ಕೌಟುಂಬಿಕ ಕೆಲಸದ ಹಿನ್ನೆಲೆ ಕೆ.ಎಲ್. ರಾಹುಲ್ ಹಾಗೂ ಅಕ್ಷರ್ ಲಭ್ಯವಿಲ್ಲ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!