ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮುಂದಿನ ತಿಂಗಳು ನಡೆಯಲಿರುವ ಶ್ರೀಲಂಕಾ – ಭಾರತ ಏಕದಿನ ಕ್ರಿಕೆಟ್ ಮತ್ತು ಟಿ20 ಕ್ರಿಕೆಟ್ ಸರಣಿ ಆರಂಭವಾಗಲಿದ್ದು, ಶಿಖರ್ ಧವನ್ ಸಾರಥ್ಯದ ತಂಡವನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ.
ಶ್ರೀಲಂಕಾ ಪ್ರವಾಸ ಸಲುವಾಗಿ ಅನುಭವಿ ಮತ್ತು ಯುವ ಆಟಗಾರರನ್ನು ಒಳಗೊಂಡ ಒಟ್ಟು 20 ಸದಸ್ಯರ ಭಾರತ ತಂಡವನ್ನು ಪ್ರಕಟ ಮಾಡಿದೆ ಐಪಿಎಲ್ ನಲ್ಲಿ ಮಿಂಚಿರುವ ಅನೇಕ ಯುವ ಆಟಗಾರರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಭಾರತ ತಂಡ:
ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಲ್, ರಾಹುಲ್ ಚಹರ್, ಕೆ ಗೌತಮ್, ಕ್ರುಣಾಲ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಹರ್, ನವದೀಪ್ ಸೈನಿ, ಚೇತನ್ ಸಕರಿಯಾ.
ನೆಟ್ ಬೌಲರ್ಸ್: ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಅರ್ಷದೀಪ್ ಸಿಂಗ್, ಸಾಯ್ ಕಿಶೋರ್, ಸಿಮ್ರನ್ಜೀತ್ ಸಿಂಗ್.
ಜೂನ್ 28ರಂದು ಶ್ರೀಲಂಕಾ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡ, ಕೊಲಂಬಿದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಜುಲೈ- 13,16, 18 ರಂದು ಏಕದಿನ ಮತ್ತು ಜುಲೈ-21,23,25 ರಂದು ಟಿ20 ಪಂದ್ಯ ಆಡಲಿದೆ.