ಭಾರತೀಯ ಸೇನೆಗೆ ಮತ್ತಷ್ಟು ಬಲ: ʼಅಗ್ನಿ-4ʼ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪರಮಾಣು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ, ʼಅಗ್ನಿ-4ʼ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಒಡಿಸ್ಸಾದ ಕರಾವಳಿ ಪ್ರದೇಶದಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಸೋಮವಾರ ಸಂಜೆ 7.30 ರ ಸುಮಾರಿಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ʼಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್‌ ವತಿಯಿಂದ ಈ ಪರೀಕ್ಷೆ ನಡೆಸಲಾಗಿದ್ದು, ಸುಮಾರು 4 ಸಾವಿರ ಕಿಮೀ ದೂರದ ಗುರಿಯನ್ನು ನಿಗದಿಯಂತೆ ಯಶಸ್ವಿಯಾಗಿ ಮುಟ್ಟಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ. ಅಗ್ನಿ-4 ಕ್ಷಿಪಣಿಯು ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ʼಅಗ್ನಿʼ ಸರಣಿಯ ವಿನೂತನ ಅಸ್ತ್ರವಾಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ( ಡಿಆರ್‌ ಡಿಓ) ಈ ಕ್ಷಿಪಣಿಯನ್ನು ನಿರ್ಮಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!