ಭಾರತ ಟೆಸ್ಟ್​ ತಂಡದ ನಾಯಕನಾಗಿ ರೋಹಿತ್ ಶರ್ಮಾ ನೇಮಕ: ಶ್ರೀಲಂಕಾ ವಿರುದ್ಧದ ಸರಣಿಗೆ ಟೀಮ್ ಪ್ರಕಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್​ ಸರಣಿಗೆರೋಹಿತ್ ಶರ್ಮಾ ಅವರನ್ನು ಭಾರತ ತಂಡದ ನಾಯಕನ್ನನಾಗಿ ನೇಮಕ ಮಾಡಿದ್ದು,  ವೇಗದ ಬೌಲರ್​ ಜಸ್ಪ್ರೀತ್ ಬುಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ಸರಣಿಗೆ 11 ಆಟಗಾರರ ಭಾರತ ತಂಡವನ್ನ ಬಿಸಿಸಿಐ ಘೋಷಿಸಿದೆ.

ಮಾರ್ಚ್​​​ 1ರಿಂದ ಟೆಸ್ಟ್​ ಸರಣಿ ನಡೆಯಲಿದ್ದು, ರೋಹಿತ್ ಶರ್ಮಾ ಖಾಯಂ ಟೆಸ್ಟ್​ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್​ ಶರ್ಮಾ ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ

ರೋಹಿತ್ ಶರ್ಮಾ ಅದ್ಭುತ ಕ್ರಿಕೆಟರ್ ಆಗಿದ್ದು, ​ ಎಷ್ಟು ಸಮಯದ ವರೆಗೂ ಫಿಟ್​ ಆಗಿ, ಟೆಸ್ಟ್​ ಕ್ರಿಕೆಟ್​ ಆಡುತ್ತಾರೋ, ಅಲ್ಲಿಯವರೆಗೆ ಅವರು ನಾಯಕನಾಗಿರುತ್ತಾರೆ. ಇವರ ನಾಯಕತ್ವದಡಿಯಲ್ಲಿ ಕೆಎಲ್ ರಾಹುಲ್​, ರಿಷಭ್ ಪಂತ್ ಮತ್ತು ಬುಮ್ರಾರನ್ನು ಭವಿಷ್ಯದ ನಾಯಕರನ್ನಾಗಿ ಬೆಳೆಸಬಹುದು ಎಂದು ಚೇತನ್​ ಶರ್ಮಾ ತಿಳಿಸಿದ್ದಾರೆ.

ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿ ಸೋತ ಬಳಿಕ ವಿರಾಟ್​ ಕೊಹ್ಲಿ ಟೆಸ್ಟ್​ ನಾಯಕತ್ವವನ್ನು ತ್ಯಜಿಸಿದ್ದರು. ಇದೀಗ ರೋಹಿತ್ ಶರ್ಮಾ ಅವರನ್ನು ಖಾಯಂ ಟೆಸ್ಟ್​ ತಂಡದ ನಾಯಕನನ್ನಾಗಿ ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ.

ತಂಡದಿಂದ ರಹಾನೆ, ಪೂಜಾರ ಔಟ್
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಇಶಾಂತ್ ಶರ್ಮಾ ಮತ್ತು ವೃದ್ಧಿಮಾನ್ ಸಹಾ ಅವರನ್ನು ಕೈಬಿಡಲಾಗಿದೆ.

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಮತ್ತು ಟಿ20 ಸರಣಿಗಳೆರಡಕ್ಕೂ ಶಾರ್ದೂಲ್ ಠಾಕೂರ್ʼಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ತಿಳಿಸಿದ್ದಾರೆ.

ಶ್ರೀಲಂಕಾ ಸರಣಿಗೆ ಟೆಸ್ಟ್​ ತಂಡ:
ರೋಹಿತ್ ಶರ್ಮಾ (ನಾಯಕ), ಪ್ರಿಯಾಂಕ್ ಪಾಂಚಾಲ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭ್ಮನ್ ಗಿಲ್, ರಿಷಭ್ ಪಂತ್ (ವಿಕೆಟ್ ಕೀಪರ್​), ಕೆಎಸ್ ಭರತ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಸೌರಭ್ ಕುಮಾರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಮೊಹಮ್ಮಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ)

ಟಿ 20 ತಂಡ:
ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಸಿರಾಜ್, ಸಂಜು ಸ್ಯಾಮ್ಸನ್ (ವಿ.ಕೀ), ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್

ಶ್ರೀಲಂಕಾ ವಿರುದ್ದದ ಸರಣಿಯ ವೇಳಾಪಟ್ಟಿ ಹೀಗಿದೆ:

1ನೇ ಟಿ20: ಫೆಬ್ರವರಿ 24 (ಲಕ್ನೋ)

ಎರಡನೇ ಟಿ20: ಫೆಬ್ರವರಿ 26 (ಧರ್ಮಶಾಲಾ)

ಮೂರನೇ ಟಿ20: ಫೆಬ್ರವರಿ 27 (ಧರ್ಮಶಾಲಾ)

1ನೇ ಟೆಸ್ಟ್: 4 ರಿಂದ 8 ಮಾರ್ಚ್ (ಮೊಹಾಲಿ)

2ನೇ ಟೆಸ್ಟ್ (ಹಗಲು-ರಾತ್ರಿ): ಮಾರ್ಚ್ 12-16 (ಬೆಂಗಳೂರು)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!