March 18, 2026
Wednesday, March 18, 2026
spot_img

ಹರಿಣಗಳ ಬೇಟೆಗೆ ಸುಸ್ತಾದ ಭಾರತ: 188ರ ಗುರಿ ಬೆನ್ನಟ್ಟುವಲ್ಲಿ ವಿಫಲವಾದ ‘ಸೂರ್ಯ’ ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆದ ಟಿ20 ವಿಶ್ವಕಪ್‌ನ ಸೂಪರ್-8 ಹಂತದ ಹೈವೋಲ್ಟೇಜ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ಡೇವಿಡ್ ಮಿಲ್ಲರ್ (63 ರನ್) ಮತ್ತು ಟ್ರಿಸ್ಟನ್ ಸ್ಟಬ್ಸ್ (44 ರನ್) ಅವರ ಸ್ಫೋಟಕ ಆಟದ ನೆರವಿನಿಂದ 187 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

ಭಾರತದ ಪರ ಜಸ್ಪ್ರೀತ್ ಬುಮ್ರಾ ಕೇವಲ 15 ರನ್ ನೀಡಿ 3 ವಿಕೆಟ್ ಪಡೆಯುವ ಮೂಲಕ ಅಮೋಘ ಬೌಲಿಂಗ್ ಪ್ರದರ್ಶಿಸಿದರು.

188 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಇಶಾನ್ ಕಿಶನ್ ಸೊನ್ನೆ ಸುತ್ತಿದರೆ, ಸೂರ್ಯಕುಮಾರ್ ಯಾದವ್ (18) ಮತ್ತು ಹಾರ್ದಿಕ್ ಪಾಂಡ್ಯ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿದರು. ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ ಮತ್ತು ಮಾರ್ಕೊ ಜಾನ್ಸೆನ್ ಭಾರತದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !