ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಮತ್ತು 2024-25 ರ ವೇಳೆಗೆ USD 5 ಟ್ರಿಲಿಯನ್ GDP ಸಾಧಿಸಲು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.
ಉದ್ಯಮ ಸಂಸ್ಥೆ FICCI ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಲು ಕೇಂದ್ರ ಸರ್ಕಾರವು ಬೆಳವಣಿಗೆ ಮತ್ತು ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಜಾಗತಿಕ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) 2030 ಸಾಧಿಸುವಲ್ಲಿ ಭಾರತವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. ಇದೇವೇಳೆ ಭಾರತವು ತನ್ನ ರಫ್ತುಗಳನ್ನು ಹೆಚ್ಚಿಸುವ ಮತ್ತು ಆಮದುಗಳನ್ನು ಕಡಿಮೆ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದರು.
“ನಾವು ಜೈವಿಕ-ಎಥೆನಾಲ್, ಜೈವಿಕ-ಸಿಎನ್‌ಜಿ, ಜೈವಿಕ-ಎಲ್‌ಎನ್‌ಜಿ ಮತ್ತು ಹಸಿರು ಹೈಡ್ರೋಜನ್‌ನಂತಹ ಪರ್ಯಾಯ, ಶುದ್ಧ ಮತ್ತು ಹಸಿರು ಇಂಧನವನ್ನು ಅಭಿವೃದ್ಧಿಪಡಿಸಲು ಸಹ ಕೆಲಸ ಮಾಡುತ್ತಿದ್ದೇವೆ” ಎಂದು ಅವರು ಹೇಳಿದರು. ಪ್ರಸ್ತುತ ಭಾರತದ ಆಟೋಮೊಬೈಲ್ ಉದ್ಯಮವು 7.5 ಲಕ್ಷ ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಮತ್ತು ಅದನ್ನು 15 ಲಕ್ಷ ಕೋಟಿ ರೂಪಾಯಿಗಳಿಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಇದು ಸಾಕಷ್ಟು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ.” ಎಂದು ಸಚಿವರು ಹೇಳಿದ್ದಾರೆ.