ಭಾರತ ದಾಳಿಗೆ ಮತ್ತೆ ಕುಸಿದ ಜಿಂಬಾಬ್ವೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆತಿಥೇಯ ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಬೌಲರ್ ಪಾರಮ್ಯ ಮೆರೆದಿದ್ದು, . ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡ ಟೀಂ ಇಂಡಿಯಾ ಎದುರಾಳಿ ತಂಡವನ್ನ ಕೇವಲ 161ರನ್​​​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ.
ಹರಾರೆಯ ಸ್ಪೋರ್ಟ್ಸ್​​ ಕ್ಲಬ್​ ಮೈದಾನದಲ್ಲಿ ಎರಡನೇ ಏಕದಿನ ಪಂದ್ಯ ನಡೆಯುತ್ತಿದೆ. ಟೀಂ ಇಂಡಿಯಾ ಮಾರಕ ಬೌಲಿಂಗ್​ ಎದುರಿಸುವಲ್ಲಿ ವಿಫಲವಾದ ಜಿಂಬಾಬ್ವೆ 38.1 ಓವರ್​​​​ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 161ರನ್​​ಗಳಿಸಿದೆ. ತಂಡದ ಪರ ಸೇನ್​ ವಿಲಿಯನ್ಸ್​​​(42) ಹಾಗೂ ಬುರ್ಲೆ(39) ವೈಯಕ್ತಿಕ ಗರಿಷ್ಠ ಸ್ಕೋರ್​ರ ಆಗಿದ್ದಾರೆ.
ಟೀಂ ಇಂಡಿಯಾ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಶಾರ್ದೂಲ್ ಠಾಕೂರ್​ 3 ವಿಕೆಟ್ ಪಡೆದರೆ, ಸಿರಾಜ್, ಪ್ರಸಿದ್ಧ ಕೃಷ್ಣ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್ ಹಾಗೂ ದೀಪಕ್ ಹೂಡಾ ತಲಾ 1 ವಿಕೆಟ್ ಪಡೆದುಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!