ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತನ್ನ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ವಿಸ್ತಾರವಾದ ಸೂರತ್ ಡೈಮಂಡ್ ಬೋರ್ಸ್ ಅನ್ನು ಉದ್ಘಾಟಿಸಿ, ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು , ಇದು ನವ ಭಾರತದ ಶಕ್ತಿ ಮತ್ತು ನಿರ್ಣಯದ ಸಂಕೇತ. ಸೂರತ್ ವಜ್ರ ಉದ್ಯಮವು 8 ಲಕ್ಷ ಜನರಿಗೆ ಉದ್ಯೋಗ ನೀಡುತ್ತಿದೆ ಮತ್ತು ಹೊಸ ಬೋರ್ಸ್‌ನಿಂದ ಇನ್ನೂ 1.5 ಲಕ್ಷ ಉದ್ಯೋಗಗಳು ಸೇರ್ಪಡೆಯಾಗಲಿವೆ, ಇದು ಅಂತಾರಾಷ್ಟ್ರೀಯ ವಜ್ರಾಭರಣ ವ್ಯವಹಾರಕ್ಕೆ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಿದೆ ಎಂದು ಹೇಳಿದರು.
ಕಳೆದ 10 ವರ್ಷಗಳಲ್ಲಿ ಭಾರತವು 10 ನೇ ಸ್ಥಾನದಿಂದ ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ. ಈಗ, ಮೋದಿಯ ಮೂರನೇ ಇನ್ನಿಂಗ್ಸ್‌ನಲ್ಲಿ ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಸರಕಾರವು ಮುಂದಿನ 25 ವರ್ಷಗಳ ಗುರಿಗಳನ್ನು ಸಹ ನಿಗದಿಪಡಿಸಿದೆ. ನಾವು USD 5-10 ಟ್ರಿಲಿಯನ್ ಆರ್ಥಿಕತೆಯಾಗುವುದರ ಜತೆಗೆ ರಫ್ತುಗಳನ್ನು ದಾಖಲೆಯ ಎತ್ತರಕ್ಕೆ ಕೊಂಡೊಯ್ಯುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಮೋದಿ ಹೇಳಿದರು.