ಏಷ್ಯಾಕಪ್‌ 2022 | ಇಂಡೋ- ಪಾಕ್‌ ಹಣಾಹಣಿಗೆ ಮಹೂರ್ತ ನಿಗದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
2022 ರ ಏಷ್ಯಾ ಕಪ್ ಆವೃತ್ತಿಯು ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ಶ್ರೀಲಂಕಾದಲ್ಲಿ ನಡೆಯಲಿದೆ.
ಈ ವರ್ಷ ಆಸ್ಟ್ರೇಲಿಯಾದಲ್ಲಿ ಐಸಿಸಿ T20 ವಿಶ್ವಕಪ್‌ ನಡೆಯಲಿರುವುದರಿಂದ ಏಷ್ಯಾ ಕಪ್‌ ಟೂರ್ನಿಯನ್ನು ಸಹ T20 ಸ್ವರೂಪದಲ್ಲಿ ಆಯೋಜಿಸಲಾಗಿದೆ.
2018 ರಿಂದ ಈಚೆಗೆ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಏಷ್ಯಾಕಪ್‌ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ಬದ್ಧ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ- ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಹಣಾಹಣಿ ವೀಕ್ಷಿಸಲು ಕಾತರರಾಗಿದ್ದಾರೆ.  ಇದೀಗ ಶ್ರೀಲಂಕಾ ಕ್ರಿಕೆಟ್‌ ಮಂಡಳಿಯು ಟೂರ್ನಿಯ ರೂಪುರೇಷೆಗಳನ್ನು ಸಿದ್ಧಪಡಿಸಿದ್ದು‌, ಇಂಡೋ- ಪಾಕ್‌ ಮುಖಾಮುಖಿಗೆ ಮಹೂರ್ತ ನಿಗದಿಪಡಿಸಲಾಗಿದೆ. ಏಷ್ಯಾದ ಈ ಎರಡು ಬಲಾಢ್ಯ ಕ್ರಿಕೆಟ್‌ ರಾಷ್ಟ್ರಗಳು ಆಗಸ್ಟ್ 28 ರಂದು ಪರಸ್ಪರ ಮುಖಾಮುಖಿಯಾಗಲಿವೆ.
2021 ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ ಮೊಟ್ಟಮೊದಲ ಜಯ ಸಾಧಿಸಿದ ನಂತರ ಉಭಯ ತಂಡಗಳು ಪರಸ್ಪರ ಇದೇ ಮೊದಲ ಬಾರಿಗೆ ಎದುರಾಳಿಗಳಾಗುತ್ತಿರುವುದು ಕುತೂಹಲ ಮೂಡಿಸಿದೆ.
ಇದೇ ವರ್ಷ ಅಕ್ಟೋಬರ್ 23 ರಂದು ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಈ ಎರಡು ತಂಡಗಳು ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿವೆ. ಭಾರತ ತಂಡವು ಕಳೆದ ವರ್ಷದ ಸೋಲಿಗೆ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!