ಹೊಸದಿಗಂತ ಡಿಜಿಟಲ್ ಡೆಸ್ಕ್:
INDIA ಮೈತ್ರಿಕೂಟದ ಮೂರನೇ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಪಾಲ್ಗೊಳ್ಳಲಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಸೋಮವಾರ ಘೋಷಿಸಿದ್ದಾರೆ.
ನಾವು ಮುಂಬೈಗೆ ಹೋಗುತ್ತೇವೆ ಮತ್ತು ಸಭೆಯಲ್ಲಿ ನಾವು ತೆಗೆದುಕೊಳ್ಳುವ ಯಾವುದೇ ನಿರ್ಧಾರದ ಬಗ್ಗೆ ನಿಮಗೆ ತಿಳಿಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದರು.
ದೆಹಲಿಯಲ್ಲಿ ಬುಧವಾರ (ಆ.16) ಚುನಾವಣೆ ಸಿದ್ಧತೆ ಬಗ್ಗೆ ಕಾಂಗ್ರೆಸ್ ನಾಯಕರ ಸಭೆ ನಡೆದಿತ್ತು. ಬಳಿಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದೇವೆ. ಎಎಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಭೆ ಬಳಿಕ ಕಾಂಗ್ರೆಸ್ ವಕ್ತಾರರಾದ ಅಲ್ಕಾ ಲಂಬಾ ಘೋಷಿಸಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಎಎಪಿ ಒಂದು ವೇಳೆ ಕಾಂಗ್ರೆಸ್ ಈ ಹಾದಿ ತುಳಿದರೆ, INDIA ಮೈತ್ರಿ ಕೂಟದ ಮುಂದಿನ ಸಭೆಯಿಂದ ಹೊರಗುಳಿಯುವುದಾಗಿ ಹೇಳಿತ್ತು.